ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm