ಬ್ರೇಕಿಂಗ್ ನ್ಯೂಸ್
11-03-22 07:43 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಹಾಡಹಗಲೇ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿ ಕಾರು ಸಹಿತ ಒಂದು ಕೋಟಿಗೂ ಮಿಕ್ಕಿದ ನಗದು ಹಣವನ್ನು ದರೋಡೆಗೈದ ಘಟನೆ ನೆಲಮಂಗಲ ಬಳಿಯ ತುಮಕೂರು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಇನೋವಾ ಕಾರಿನಲ್ಲಿ ಬಂದಿದ್ದ 7-8 ಮಂದಿಯಿದ್ದ ದರೋಡೆಕೋರರು ಕೃತ್ಯ ನಡೆಸಿದ್ದು ಬೆದರಿಸಿ ಹಣದ ಬ್ಯಾಗ್ ಪಡೆದು ಕಾರು ಸಹಿತ ತಂಡ ಪರಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ಮಾದಾವರ ಎಂಬಲ್ಲಿ ನಾಡ್ಗೀರ್ ಕಾಲೇಜು ಬಳಿ ಘಟನೆ ನಡೆದಿದೆ. ಉದ್ಯಮಿಗಳಾದ ಯೋಗೇಶ್ ಮತ್ತು ಜೋಸೆಫ್ ಪಾಲುದಾರಿಕೆಯಲ್ಲಿ ಜುವೆಲ್ಲರಿ ಬಿಸಿನೆಸ್ ನಡೆಸುತ್ತಿದ್ದು ಹುಬ್ಬಳ್ಳಿಯಿಂದ ತಮಿಳುನಾಡಿನ ನಾಗರ ಕೋಯಿಲ್ ಗೆ ಬ್ರೀಝಾ ಕಾರಿನಲ್ಲಿ ನಗದು ಹಣ ಇರಿಸಿಕೊಂಡು ತೆರಳುತ್ತಿದ್ದರು. ಕಾರಿನಲ್ಲಿ ಯೋಗೇಶ್, ದಿನೇಶ್, ಫ್ರಾಂಕ್ಲಿನ್, ಮಣಿಕಂಠನ್ ಸತ್ಯವೇಲು ಎಂಬವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ವೇಳೆ, ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರಿದ್ದ ತಂಡ ಕಾರನ್ನು ಅಡ್ಡಗಟ್ಟಿದ್ದು ಯೋಗೇಶ್ ಮೇಲೆ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಆನಂತರ ಕಾರಿನಲ್ಲಿದ್ದವರನ್ನು ಇಳಿಸಿ, ಕಾರು ಸಹಿತ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಇತ್ತೆಂದು ಹೇಳಲಾಗುತ್ತಿದೆ. ಇವರು ಭಾರೀ ಪ್ರಮಾಣದಲ್ಲಿ ನಗದು ಹಣವನ್ನು ಒಯ್ಯುತ್ತಿರುವ ವಿಚಾರ ಗೊತ್ತಿದ್ದವರೇ ಈ ಕೃತ್ಯ ಎಸಗಿರುವ ಶಂಕೆಯಿದೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಖೆಡ್ಡಾ ತೋಡಿದ್ದಾರೆ.
Bangalore Robbers stop car rob crores of gold and flee at Nelamangala Tumakuru Highway.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm