ಬ್ರೇಕಿಂಗ್ ನ್ಯೂಸ್
16-03-22 04:07 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ತಾನು ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿ ಯುವತಿಯನ್ನು ಆರೋಪಿ ನಂಬಿಸಿ ವಂಚಿಸಿದ್ದಾನೆ. ಕಂಪನಿ ಒಂದರಲ್ಲಿ ಉದ್ಯೋಗದಲ್ಲಿರುವ ಯುವತಿ ಶಾದಿ ಡಾಟ್ ಕಾಮ್ ನಲ್ಲಿ ತನ್ನ ಸ್ವವಿವರ ಹಾಕಿದ್ದು, ಸೂಕ್ತ ವರನಿಗಾಗಿ ಹುಡುಕಾಟ ನಡೆಸಿದ್ದಳು. ಈ ವೇಳೆ, ವಿರಾಜ್ ತನ್ನ ವಿವರ ಹೇಳಿಕೊಂಡು ಕನೆಕ್ಟ್ ಆಗಿದ್ದಾನೆ. ತನ್ನ ತಂಗಿ ಫೇಮಸ್ ನಟಿಯೆಂದು ಹೇಳಿಕೊಂಡು ಪೋಸು ಕೊಟ್ಟಿದ್ದಲ್ಲದೆ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಸ್ನೇಹ ಬೆಳೆಸಿದ್ದಾನೆ.

2021ರ ಮೇ ತಿಂಗಳಲ್ಲಿ ವಿರಾಜ್ ಈ ರೀತಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಸ್ನೇಹ ಬೆಳೆಸಿದ್ದ. ಬಳಿಕ ಚಾಟಿಂಗ್ ಆರಂಭಿಸಿದ್ದಲ್ಲದೆ ಮದುವೆ ಬಗ್ಗೆ ಎರಡೂ ಮನೆಯವರಲ್ಲಿ ಮಾತುಕತೆ ನಡೆದಿತ್ತು. ಈ ನಡುವೆ, ಆರೋಪಿ ವಿರಾಜ್ ಬರ್ತ್ ಡೇಗೆ ಯುವತಿಯೇ ಐಫೋನ್, ಲ್ಯಾಪ್ಟಾಪ್ ಖರೀದಿಸಿ ಗಿಫ್ಟ್ ನೀಡಿದ್ದಳು. ಆನಂತರ ಜನವರಿ 18ರಂದು ಜಯನಗರದ ಖಾಸಗಿ ಹೊಟೇಲ್ ಗೆ ವಿರಾಜ್ ಬರಹೇಳಿದ್ದು, ಅಲ್ಲಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ಆಬಳಿಕ ಫೋನ್ ಸಂಪರ್ಕ ಕಡಿತ ಮಾಡಿಕೊಂಡು ಮೋಸ ಮಾಡಿದ್ದಾನೆ. ಕರೆ ಮಾಡಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ಸೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

ಆರೋಪಿ ವಿರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸದೆ ವಿಳಂಬ ಧೋರಣೆ ತೋರುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ ಎನ್ನಲಾಗುತ್ತಿದೆ.
Karnataka Famous Kannada actress Haripriya brother alleged of rape charges. A case has been registered at Basavanagudi Police station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm