ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm