ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm