ಬ್ರೇಕಿಂಗ್ ನ್ಯೂಸ್
31-03-22 10:31 am HK Desk news ಕ್ರೈಂ
ಬೆಳಗಾವಿ, ಮಾ.30: ಅಂಕೋಲಾ ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣದಲ್ಲಿ ಬೆಳಗಾವಿಯ ಕೋಕಾ ವಿಶೇಷ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ ಒಂಬತ್ತು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.
ಉದ್ಯಮಿ ಹತ್ಯೆ ಪ್ರಕರಣದಲ್ಲಿ ಬನ್ನಂಜೆ ರಾಜಾ ಮತ್ತು ಇತರ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ಹಿನ್ನೆಲೆಯಲ್ಲಿ ಕೋಕಾ ಕಾಯ್ದೆ ಜಾರಿಗೊಳಿಸಲಾಗಿತ್ತು. ಮೊದಲ ಬಾರಿಗೆ ಕೋಕಾ ಕಾಯ್ದೆ ಹೇರಿದ್ದ ಪ್ರಕರಣದಲ್ಲಿ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಶಿಕ್ಷೆ ಪ್ರಮಾಣವನ್ನು ಏಪ್ರಿಲ್ 4ರಂದು ನೀಡುವುದಾಗಿ ನ್ಯಾಯಾಧೀಶ ಸಿ.ಎಂ.ಜೋಶಿ ತಿಳಿಸಿದ್ದಾರೆ.
ಅಲ್ಲದೆ, ಪ್ರಕರಣದಲ್ಲಿ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಲಾಗಿದೆ. ಅದರಂತೆ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ, 16ನೇ ಆರೋಪಿ ಉತ್ತರ ಕನ್ನಡದ ಆನಂದ ನಾಯಕ್ ದೋಷಮುಕ್ತರಾಗಿದ್ದಾರೆ.
ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ. ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ,
ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2013 ಡಿಸೆಂಬರ್ 21 ರಂದು ಅಂಕೋಲಾದಲ್ಲಿ ಉದ್ಯಮಿ ಆರ್.ಎನ್. ನಾಯಕ್ ಅವರನ್ನು ಹತ್ಯೆ ಮಾಡಲಾಗಿತ್ತು. ಹಫ್ತಾ ಕೇಳಿದ್ದಕ್ಕೆ ಕೊಡದೇ ಇದ್ದುದಕ್ಕೆ ಸಹಚರರ ಮೂಲಕ ಕೊಲ್ಲಿಸಿದ್ದಾಗಿ ಭೂಗತ ಪಾತಕಿ ಬನ್ನಂಜೆ ರಾಜಾ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ. ಆಗಿನ ಪಶ್ಚಿಮ ವಲಯ ಐಜಿಪಿ ಆಗಿದ್ದ ಪ್ರತಾಪ ರೆಡ್ಡಿ ಸೂಚನೆಯಂತೆ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಆನಂತರ, ಬನ್ನಂಜೆ ರಾಜಾ ವಿರುದ್ಧ ಇಂಟರ್ ಪೋಲ್ ನೋಟೀಸ್ ಜಾರಿಗೊಳಿಸಿ 2015 ರಲ್ಲಿ ಮೊರಕ್ಕೋದಲ್ಲಿ ಬಂಧಿಸಲಾಗಿತ್ತು. ಪ್ರತಾಪ ರೆಡ್ಡಿ ತಂಡ ಮೊರಕ್ಕೋದಿಂದ ರಾಜಾನನ್ನು ಕರೆತಂದಿದ್ದರು. ಆರ್.ಎನ್. ನಾಯಕ್ ಹತ್ಯೆ ಸೇರಿ ಮಂಗಳೂರು, ಉಡುಪಿ, ಮುಂಬೈ, ಬೆಂಗಳೂರಿನಲ್ಲಿ ಬನ್ನಂಜೆ ರಾಜಾ 30 ಕ್ಕೂ ಹೆಚ್ಚು ಪ್ರಕರಣ ಎದುರಿಸುತ್ತಿದ್ದಾನೆ.
ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವ ವಕಾಲತ್ತು ಮಾಡಿದ್ದರು. ಬನ್ನಂಜೆ ರಾಜಾ ಪರ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು. ಕೋರ್ಟಿನಲ್ಲಿ ತನ್ನ ಅಪರಾಧ ಒಪ್ಪಿಕೊಂಡಿದ್ದರಿಂದ ಸುಪಾರಿ ಕಿಲ್ಲರ್ ಮತ್ತು ಸ್ಕೆಚ್ ಹಾಕಿದ್ದ ಬನ್ನಂಜೆ ರಾಜಾ ವಿರುದ್ಧ ಪ್ರಕರಣ ತಗ್ಲಾಕ್ಕೊಂಡಿತ್ತು. ಇದೀಗ ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಯಾಗಿದ್ದ ಕೋಕಾ ಕಾಯ್ದೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದು ಪೊಲೀಸರ ತಂಡ ಮಹತ್ವದ ಸಾಧನೆ ಮಾಡಿದೆ.
Karnataka’s mafia don Rajendra Kumar alias Bannanje Raja, accused of over 50 criminal cases, along with nine others were on Wednesday, March 30, found guilty of murdering BJP leader and mining industrialist RN Nayak. A special court in Belagavi, set up to hear cases under the Karnataka Control of Organised Crime (KCOC) Act, 2000, was hearing the case of RN Nayak’s murder in 2013 in Ankola in Karnataka’s Uttara Kannada district. This was the first case filed under the KCOC Act.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm