ಬ್ರೇಕಿಂಗ್ ನ್ಯೂಸ್
15-05-22 07:07 pm Mangalore Correspondent ಕ್ರೈಂ
ಉಳ್ಳಾಲ, ಮೇ 15: ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಪತಿರಾಯನು ಆತ್ಮಹತ್ಯೆ ಎಂದು ಬಿಂಬಿಸಿದ್ದು, ಶವ ಮಹಜರು ಪರೀಕ್ಷೆಯ ವರದಿಯಲ್ಲಿ ಕೊಲೆ ಕೃತ್ಯ ಸಾಬೀತುಗೊಂಡ ಹಿನ್ನೆಲೆಯಲ್ಲಿ ಆರೋಪಿ ಪತಿ ಜೈಲು ಪಾಲಾದ ಘಟನೆ ಕುಂಪಲದ ಚೇತನ ನಗರದಲ್ಲಿ ನಡೆದಿದೆ.
ಜೋಸೆಫ್ ಫ್ರಾನ್ಸಿಸ್ (54) ಎಂಬಾತನೇ ಪತ್ನಿಯ ಕೊಲೆ ಆರೋಪದಲ್ಲಿ ಬಂಧಿತ ವ್ಯಕ್ತಿ. ಕೇರಳದ ಕೊಚ್ಚಿ ನಿವಾಸಿ ಜೋಸೆಫ್ ಎಂಬವರ ಪುತ್ರಿ ಶೈಮಾ(44) ಎಂಬಾಕೆಯನ್ನು ಜೋಸೆಫ್ ಫ್ರಾನ್ಸಿಸ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ದಂಪತಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ, ಚೇತನ ನಗರ ಎಂಬಲ್ಲಿ ವಾಸವಾಗಿದ್ದರು. ಮೇ 11 ರ ಬುಧವಾರ ಸಂಜೆ ಕ್ಷುಲ್ಲಕ ವಿಚಾರವೊಂದಕ್ಕೆ ಪತಿ, ಪತ್ನಿಯರ ನಡುವೆ ಜಗಳ ನಡೆದಿತ್ತು.

ಈ ಸಂದರ್ಭ ಜೋಸೆಫ್ ಫ್ರಾನ್ಸಿಸ್ ತನ್ನ ಪತ್ನಿ ಶೈಮಾಳಿಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಶೈಮಾಲಿಗೆ ಜೋಸೆಫ್ ವಿಷವನ್ನು ಕುಡಿಸಿದ್ದನಂತೆ. ತಕ್ಷಣ ಶೈಮಾಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದೇ ದಿನ ರಾತ್ರಿ ಅವರು ಮೃತಪಟ್ಟಿದ್ದರು. ಈ ಬಗ್ಗೆ ಅನುಮಾನಗೊಂಡ ಶೈಮಾ ಅವರ ತಂದೆ ಕೊಚ್ಚಿ ನಿವಾಸಿ ಜೋಸೆಫ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಬಂಧಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಆರೋಪಿ ಜೋಸೆಫ್ ಆಕೆ ವಿಷ ಕುಡಿದು ಗಂಭೀರ ಸ್ಥಿತಿಯಲ್ಲಿದ್ದಳು ಎಂದು ಬಿಂಬಿಸಿದರೂ ಸಾವಿನ ಬಗ್ಗೆ ಪೊಲೀಸರಿಗೆ ಸಂಶಯ ಉಂಟಾಗಿತ್ತು.

ಶನಿವಾರ ಶವ ಮಹಜರು ಪರೀಕ್ಷೆಯ ವರದಿ ಬಂದಿದ್ದು, ಇದರಿಂದ ಕೊಲೆ ಕೃತ್ಯ ಬಹಿರಂಗಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ತನಿಖೆಗೆ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜೋಸೆಫ್ , ಶೈಮಾ ದಂಪತಿಯ ಇಬ್ಬರು ಪುತ್ರರು ವ್ಯಾಸಂಗ ನಡೆಸುತ್ತಿದ್ದು, ಕೊಲೆ ನಡೆದ ವೇಳೆ ಮನೆಯಲ್ಲೇ ಇದ್ದರಂತೆ. ತಂದೆಯನ್ನ ರಕ್ಷಿಸಲಿಕ್ಕಾಗಿ ಪೊಲೀಸರಲ್ಲಿ ಮಕ್ಕಳು ಸತ್ಯ ಮರೆಮಾಚಿದ್ದರೆಂದು ತಿಳಿದುಬಂದಿದೆ. ತಂದೆ, ತಾಯಿಯ ಜಗಳದಲ್ಲೀಗ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ.
Mangalore murder Husband arrested for killing wife by beating her with cane in Kumpala. The deceased has been identified as Shaima(44). The arrested has been identified as Joseph. Husband tired to convince the police that it was a suicide by finally was caught by Ullal police.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm