ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm