ಬ್ರೇಕಿಂಗ್ ನ್ಯೂಸ್
09-07-22 08:45 pm Source: Vijayakarnataka ಡಿಜಿಟಲ್ ಟೆಕ್
ಅತ್ಯಂತ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ತಯಾರಿಸುವಲ್ಲಿ ಹೆಸರುವಾಸಿಯಾಗಿರುವ ವಿಶ್ವದ ಜನಪ್ರಿಯ ಸ್ಮಾರ್ಟ್ಫೋನ್ ಬ್ರ್ಯಾಂಡ್ Tecno ಭಾರತದಲ್ಲಿ ತನ್ನ ಬಹುನಿರೀಕ್ಷಿತ Tecno Spark 8P ಸ್ಮಾರ್ಟ್ಫೋನನ್ನು ಬಿಡುಗಡೆಗೊಳಿಸಿದೆ. ಬಜೆಟ್ ಬೆಲೆಯಲ್ಲಿ ಸ್ಮಾರ್ಟ್ಫೋನ್ ಒಂದನ್ನು ಖರೀದಿಸುವ ಆಶಯವನ್ನು ಹೊತ್ತಿರುವ ದೇಶದ ಗ್ರಾಹಕರಿಗಾಗಿ, MediaTek Helio G85 ಪ್ರೊಸೆಸರ್, 6.6-ಇಂಚಿನ FHD+ ಡಿಸ್ಪ್ಲೇ ಮತ್ತು ಹಿಂಭಾಗದಲ್ಲಿ 50MP ಟ್ರಿಪಲ್-ಕ್ಯಾಮೆರಾ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊತ್ತಿರುವ Tecno Spark 8P ಸ್ಮಾರ್ಟ್ಫೋನನ್ನು ದೇಶದ ಮಾರುಕಟ್ಟೆಗೆ 10,999 ರೂ.ಗಳ ಬಜೆಟ್ ಬೆಲೆಯಲ್ಲಿ ಪರಿಚಯಿಸಲಾಗಿದೆ. ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
Tecno Spark 8P ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು
ನೂತನ Tecno Spark 8P ಸ್ಮಾರ್ಟ್ಫೋನ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ವಾಟರ್ಡ್ರಾಪ್ ನಾಚ್ ವಿನ್ಯಾಸದಲ್ಲಿ 2408 x 1080 ಪಿಕ್ಸೆಲ್ಗಳ ರೆಸಲ್ಯೂಶನ್ನೊಂದಿಗೆ 6.6-ಇಂಚಿನ FHD+ ಡಿಸ್ಪ್ಲೇಯನ್ನು ಹೊತ್ತು ಬಂದಿದೆ. ಹುಡ್ ಅಡಿಯಲ್ಲಿ, ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ ಜಿ85 ಪ್ರೊಸೆಸರ್ನಿಂದ ಚಾಲಿತವಾಗಿರುವ ಈ ಸ್ಮಾರ್ಟ್ಫೋನ್ 4GB RAM ಮತ್ತು 64GB ಸ್ಟೋರೇಜ್ ಅನ್ನು ಹೊಂದಿದೆ. ಇದು 512GB ವರೆಗೆ ಹೆಚ್ಚುವರಿ ಸಂಗ್ರಹಣೆಯನ್ನು ಬೆಂಬಲಿಸುವ ಮೈಕ್ರೊ SD ಕಾರ್ಡ್ ಸ್ಲಾಟ್ ಅನ್ನು ಹೊಂದಿರುವುದು ಮಾತ್ರವಲ್ಲದೇ, ಮೆಮೊರಿ ಫ್ಯೂಷನ್ ವೈಶಿಷ್ಟ್ಯದ ಮೂಲಕ 3GB ವರೆಗಿನ ಹೆಚ್ಚುವರಿ RAM ಅನ್ನು ಸಹ ಬೆಂಬಲಿಸಲಿದೆ. Tecno ಕಂಪೆನಿ ಪ್ರಕಾರ, ಸೂಪರ್ ಬೂಸ್ಟ್ ಸಿಸ್ಟಮ್ ಆಪ್ಟಿಮೈಸೇಶನ್ನೊಂದಿಗೆ ವಿವಿಧ ಅಪ್ಲಿಕೇಶನ್ಗಳನ್ನು ಪ್ರಾರಂಭಿಸಲು ತೆಗೆದುಕೊಳ್ಳುವ ಸರಾಸರಿ ಸಮಯದಲ್ಲಿ Tecno Spark 8P ಸ್ಮಾರ್ಟ್ಫೋನ್ 43% ವರೆಗೆ ಸುಧಾರಣೆಯನ್ನು ನೀಡುತ್ತದೆ ಎಂದು ಹೇಳಿಕೊಂಡಿದೆ.
ಕ್ಯಾಮೆರಾ ವಿಭಾಗದಲ್ಲಿ, Tecno Spark 8P ಸ್ಮಾರ್ಟ್ಫೋನ್ ಹಿಂಭಾಗದಲ್ಲಿ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದು 50MP ಪ್ರಾಥಮಿಕ ಸಂವೇದಕ, 2MP ಸೆಕೆಂಡರಿ ಡೆಪ್ತ್ ಸೆನ್ಸರ್ ಮತ್ತು AI ಲೆನ್ಸ್ ಅನ್ನು ಒಳಗೊಂಡಿದೆ. ಈ ಕ್ಯಾಮೆರಾವು ಬೊಕೆ, ಸ್ಲೋ ಮೋಷನ್ ವೀಡಿಯೊ ಮತ್ತು 2ಕೆ ಟೈಮ್ ಲ್ಯಾಪ್ಸ್ನಂತಹ ಇಮೇಜಿಂಗ್ ವೈಶಿಷ್ಟ್ಯಗಳನ್ನು ಹೊಂದಿದೆ. ಇತ್ತ ಮುಂಭಾಗದಲ್ಲಿ, 8MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇತರ ಗಮನಾರ್ಹ ವೈಶಿಷ್ಟ್ಯಗಳಲ್ಲಿ, Tecno Spark 8P ಸ್ಮಾರ್ಟ್ಫೋನ್ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5000mAh ಬ್ಯಾಟರಿಯಿಂದ ಶಕ್ತಿಯನ್ನು ಪಡೆಯುತ್ತದೆ. ಇವುಗಳ ಜೊತೆಗೆ DTS ಸರೌಂಡ್ ಸೌಂಡ್ ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IPX2 ರೇಟಿಂಗ್ಗೆ ಬೆಂಬಲವಿದೆ. ಅಲ್ಲದೆ, ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸಂವೇದಕ, ಆಂಡ್ರಾಯ್ಡ್ 11 HiOS 7.6, ಡ್ಯುಯಲ್ ಸಿಮ್ ಬೆಂಬಲ ಮತ್ತು ಇತ್ತೀಚಿನ ಸ್ಟ್ಯಾಂಡರ್ಡ್ ಕನೆಕ್ಟಿವಿಟಿ ಆಯ್ಕೆಗಳನ್ನು ಬೆಂಬಲಿಸಲಿದೆ.
Tecno Spark 8P ಸ್ಮಾರ್ಟ್ಫೋನನ್ನು 4GB RAM ಮತ್ತು 64GB ಸ್ಟೋರೇಜ್ ಮೆಮೊರಿಯೊಂದಿಗೆ ಒಂದೇ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಮೊದಲೇ ಹೇಳಿದಂತೆ, Tecno Spark 8P ಸ್ಮಾರ್ಟ್ಫೋನಿನ ಬೆಲೆ 10,999 ರೂ.ಗಳಾಗಿದ್ದು, ಐರಿಸ್ ಪರ್ಪಲ್, ಅಟ್ಲಾಂಟಿಕ್ ಬ್ಲೂ, ಟರ್ಕೋಯಿಸ್ ಸಯಾನ್ ಮತ್ತು ಟಹೀಟಿ ಗೋಲ್ಡ್ ಸೇರಿದಂತೆ ಹಲವಾರು ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರಲಿದೆ. Tecno ಕಂಪೆನಿಯ ಅಧಿಕೃತ ವೆಬ್ಸೈಟ್ ಮತ್ತು ದೇಶದ ಪ್ರಮುಖ ಇ-ಕಾಮರ್ಸ್ ತಾಣಗಳು ಹಾಗೂ ದೇಶಾದ್ಯಂತ ಆಫ್ಲೈನ್ ಸ್ಟೋರ್ಗಳ ಮೂಲಕ Tecno Spark 8P ಸ್ಮಾರ್ಟ್ಫೋನನ್ನು ಖರೀದಿಸಬಹುದು ಎಂದು ಕಂಪೆನಿ ತಿಳಿಸಿದೆ.
Tecno Spark 8p With 50mp Camera Launched.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm