ಬ್ರೇಕಿಂಗ್ ನ್ಯೂಸ್
28-07-22 07:43 pm Source: Vijayakarnataka ಡಿಜಿಟಲ್ ಟೆಕ್
ಬರೋಬ್ಬರಿ ನಾಲ್ಕು ವರ್ಷಗಳ ನಂತರ ಭಾರತದಲ್ಲಿ Google Pixel ಸರಣಿಯ ಬಹುನಿರೀಕ್ಷಿತ Google Pixel 6a ಸ್ಮಾರ್ಟ್ಫೋನ್ ಮಾರಾಟಕ್ಕೆ ಬಂದಿದೆ. ಇಂದಿನಿಂದ ಫ್ಲಿಪ್ಕಾರ್ಟ್ ನಲ್ಲಿ ಏಕೈಕ 6GB RAM ಮತ್ತು 128GB ಸ್ಟೋರೇಜ್ ಮಾದರಿಯ Google Pixel 6a ಸ್ಮಾರ್ಟ್ಫೋನ್ ಅನ್ನು 43,999 ರೂ. ಬೆಲೆಯಲ್ಲಿ ಮಾರಾಟಕ್ಕೆ ಇಡಲಾಗಿದ್ದು, Axis ಬ್ಯಾಂಕ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ 4,000 ತ್ವರಿತ ಕ್ಯಾಶ್ಬ್ಯಾಕ್ ಮತ್ತು 19,000 ರೂ.ಗಳ ವಿನಿಮಯ ಕೊಡುಗೆಯನ್ನು ಒದಗಿಸಲಾಗಿದೆ. ಇಷ್ಟೇ ಅಲ್ಲದೇ, Google Pixel 6a ಸ್ಮಾರ್ಟ್ಫೋನ್ ಖರೀದಿಸುವ ಗ್ರಾಹಕರಿಗೆ YouTube Premium ಮತ್ತು Google One ಸೇವೆಗಳಿಗೆ ಮೂರು ತಿಂಗಳ ಉಚಿತ ಚಂದಾದಾರಿಕೆಯನ್ನು ಸಹ ನೀಡಲಾಗಿದೆ
ಭಾರತದಲ್ಲಿ ಚಾಕ್ ಮತ್ತು ಚಾರ್ಕೋಲ್ ಎಂಬ ಎರಡು ಬಣ್ಣದ ಆಯ್ಕೆಗಳಲ್ಲಿ Google Pixel 6a ಸ್ಮಾರ್ಟ್ಫೋನ್ ಖರೀದಿಗೆ ಲಭ್ಯವಿದ್ದು, ಈ ನೂತನ ಸ್ಮಾರ್ಟ್ಫೋನಿನಲ್ಲಿರುವ ವೈಶಿಷ್ಟ್ಯಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.
Google Pixel 6a ಸ್ಮಾರ್ಟ್ಫೋನಿನ ವಿಶೇಷಣಗಳು
ನೂತನ Google Pixel 6a ಸ್ಮಾರ್ಟ್ಫೋನ್ 6.1-ಇಂಚಿನ ಫುಲ್ HD+ (1,080 x 2,400 ಪಿಕ್ಸೆಲ್ಗಳು) OLED ಡಿಸ್ಪ್ಲೇಯನ್ನು ಹೊಂದಿದೆ. 20:9 ಅನುಪಾತದಲ್ಲಿರುವ ಈ ಸ್ಮಾರ್ಟ್ಫೋನಿನ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಯನ್ನು ಹೊಂದಿದೆ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಹೊಂದಿರುವದನ್ನು ಸಹ ನಾವು ನೋಡಬಹುದು. ಇನ್ನು ಹುಡ್ ಟಡಿಯಲ್ಲಿ, Google Pixel 6a ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಪ್ರೊಸೆಸರ್ನಿಂದ ಚಾಲಿತವಾಗಿದೆ. ಈ ಪ್ರೊಸೆಸರ್ ಅನ್ನು 6GB LPDDR5 RAM ನೊಂದಿಗೆ ಜೋಡಿಸಲಾಗಿದೆ. ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿರುವ ಈ ಸ್ಮಾರ್ಟ್ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.
ಫೋಟೋಗಳು ಮತ್ತು ವೀಡಿಯೊಗಳಿಗಾಗಿ, Google Pixel 6a ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ನೊಂದಿಗೆ ಬಿಡುಗಡೆಯಾಗಿದೆ. ರಿಯರ್ ಕ್ಯಾಮೆರಾವು f/1.7 ಅಪಾರ್ಚರ್ ನೊಂದಿಗೆ ಲೆನ್ಸ್ನೊಂದಿಗೆ 12.2-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವ ಮತ್ತು 12-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕದೊಂದಿಗೆ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಒಳಗೊಂಡಿದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್ಗಳಿಗಾಗಿ, Google Pixel 6a ಸ್ಮಾರ್ಟ್ಫೋನಿನಲ್ಲಿ f/2.0 ಅಪರ್ಚರ್ ಲೆನ್ಸ್ನೊಂದಿಗೆ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. Google Pixel 6a ಹಿಂದಿನ ಕ್ಯಾಮರಾವು 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ನೀಡುತ್ತದೆ ಮತ್ತು ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.
Google Pixel 6a ಸ್ಮಾರ್ಟ್ಫೋನ್ 128GB ಅಂತರ್ಗತ ಸಂಗ್ರಹಣೆಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ವೈಶಿಷ್ಟ್ಯಗಳು ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸಂವೇದಕದೊಂದಿಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಬ್ಯಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸಾಮೀಪ್ಯ ಸಂವೇದಕವನ್ನು ಸ್ಮಾರ್ಟ್ಫೋನ್ ಒಳಗೊಂಡಿವೆ. ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುವ Pixel 6a ನಲ್ಲಿ Google 4,410mAh ಬ್ಯಾಟರಿಯನ್ನು ಒದಗಿಸಲಾಗಿದ್ದು, ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ತೀವ್ರ ಬ್ಯಾಟರಿ ಸೇವರ್ ಮೋಡ್ ಅನನ್ನು ಹೊಂದಿದೆ ಎಂದು ಹೇಳಲಾಗಿದೆ.
Google Pixel 6a Go On Sale For First Time In India Today Price, Specifications, Offers.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm