ಬ್ರೇಕಿಂಗ್ ನ್ಯೂಸ್
04-10-22 08:16 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್ಫೋನ್ ಬ್ರ್ಯಾಂಡ್ Oppo ದೇಶದಲ್ಲಿಂದು ತನ್ನ ಮತ್ತೊಂದು A-ಸರಣಿಯ ಸ್ಮಾರ್ಟ್ಫೋನನ್ನು ಬಿಡುಗಡೆಗೊಳಿಸಿದೆ. ದೇಶದ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ ಖರೀದಿದಾರರನ್ನು ಗುರಿಯಾಗಿಸಿಕೊಂಡು Oppo A17 ಹೆಸರಿನ ಹೊಸ ಸ್ಮಾರ್ಟ್ಫೋನನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಈ ಸಾಧನವು ಮೀಡಿಯಾಟೆಕ್ ಹಿಲಿಯೋ P35 ಪ್ರೊಸೆಸರ್, 5000mAh ಸಾಮರ್ಥ್ಯದ ಬ್ಯಾಟರಿ, 50MP ಸಾಮರ್ಥ್ಯದ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 6.56-ಇಂಚಿನ HD+ LCD ಡಿಸ್ಪ್ಲೇಯಂತಹ ವೈಶಿಷ್ಟ್ಯಗಳನ್ನು ಹೊತ್ತು ಬಂದಿದೆ. ಹಾಗಾದರೆ, ನೂತನ Oppo A17 ಸ್ಮಾರ್ಟ್ಫೋನ್ ಹೇಗಿದೆ ಮತ್ತು ಬೆಲೆ ಎಷ್ಟು ಎಂಬ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
Oppo A17 ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು
ನೂತನ Oppo A17 ಸ್ಮಾರ್ಟ್ಫೋನಿನಲ್ಲಿ ವಾಟರ್ಡ್ರಾಪ್ ವಿನ್ಯಾಸದ 6.56 ಇಂಚಿನ 6.56-ಇಂಚಿನ HD+ LCD ಡಿಸ್ಪ್ಲೇಯನ್ನು ಅಳವಡಿಸಲಾಗಿದೆ. ಈ ಡಿಸ್ಪ್ಲೇಯು 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ, 60Hz ರಿಫ್ರೆಶ್ ರೇಟ್, 83.3% ಸ್ಕ್ರೀನ್-ಟು-ಬಾಡಿ 269 ppi ಪಿಕ್ಸೆಲ್ ಸಾಂದ್ರತೆಯಯಂತಹ ವೈಶಿಷ್ಟ್ಯಗಳನ್ನು ಹೊಂದಿರುವುದು ಮಾತ್ರವಲ್ಲದೇ, ಸುರಕ್ಷತೆಗಾಗಿ ಪಾಂಡಾ ಗ್ಲಾಸ್ ರಕ್ಷಣೆಯನ್ನು ಪಡೆದಿದೆ.
ಹುಡ್ ಅಡಿಯಲ್ಲಿ, Oppo A17 ಸ್ಮಾರ್ಟ್ಫೋನ್ ಆಕ್ಟಾ-ಕೋರ್ MediaTek Helio G35 ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB LPDDR4X RAM ಮತ್ತು 64GB ಇಂಟರ್ ಸ್ಟೋರೇಜ್ ಹೊಂದಿರುವ ಈ ಸಾಧನವು ವರ್ಚುವಲ್ RAM ಫೀಚರ್ ಸಹ ಹೊಂದಿದ್ದು, ಹೆಚ್ಚುವರಿಯಾಗಿ 4GB RAM ಒದಗಿಸಲಿದೆ ಮತ್ತು ColorOS 12.1. ಹೊಂದಿರುವ ಆಂಡ್ರಾಯ್ಡ್ 12ನಲ್ಲಿ ರನ್ ಆಗಲಿದೆ ಎಂದು ಕಂಪೆನಿಯು ತಿಳಿಸಿದೆ.
ಕ್ಯಾಮೆರಾ ವಿಭಾಗದಲ್ಲಿ, Oppo A17 ಸ್ಮಾರ್ಟ್ಫೋನಿನಲ್ಲಿ 50MP ಪ್ರಾಥಮಿಕ ಶೂಟರ್ ಮತ್ತು 2MP ಡೆಪ್ತ್ ಸೆನ್ಸಾರ್ ಇರುವ ಡ್ಯುಯಲ್ ರಿಯರ್ ಕ್ಯಾಮೆರಾ ವ್ಯವಸ್ಥೆ ಇದೆ. ಇದು AI, 360-ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಮತ್ತು ಇತರ ಇಮೇಜ್ ಟೆಕ್ನಾಲಜಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದೆ.
Oppo A17 ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್ಟೈಮ್ ಸ್ಟ್ಯಾಂಡ್ಬೈ ಫೀಚರ್ಸ್ಗಳನ್ನು ಒಳಗೊಂಡಿದೆ. ಈ ಸಾಧನದ ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಡ್ಯುಯಲ್-ಸಿಮ್, 4G, ವೈಫೈ, USB-C ಚಾರ್ಜಿಂಗ್ ಪೋರ್ಟ್ ಮತ್ತು IPX4 ರೇಟಿಂಗ್, ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ನಾವು ನೋಡಬಹುದು.
Oppo A17 ಸ್ಮಾರ್ಟ್ಫೋನಿನ ಬೆಲೆ ಮತ್ತು ಲಭ್ಯತೆ
Oppo A17 ಸ್ಮಾರ್ಟ್ಫೋನನ್ನು ದೇಶದಲ್ಲಿ ಒಂದೇ 4GB + 64GB ಕಾನ್ಫಿಗರೇಶನ್ನಲ್ಲಿ 12499 ರೂ. ಬೆಲೆಗೆ ಪರಿಚಯಿಸಲಾಗಿದೆ. ಉಡಾವಣಾ ಕೊಡುಗೆಯಾಗಿ, ಖರೀದಿದಾರರು ಆಕ್ಸಿಸ್ ಬ್ಯಾಂಕ್, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಾಕ್ ಮತ್ತು ಯೆಸ್ ಬ್ಯಾಂಕ್ ಕಾರ್ಡ್ ವಹಿವಾಟುಗಳ ಮೂಲಕ 10% ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಈ ಸ್ಮಾರ್ಟ್ಫೋನ್ ಇಂದಿನಿಂದಲೇ ಆನ್ಲೈನ್ ಮತ್ತು ಆಫ್ಲೈನ್ ಸ್ಟೋರ್ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ ಎಂದು Oppo ಕಂಪೆನಿ ತಿಳಿಸಿದೆ.
ಒಪ್ಪೊ A17 ಸ್ಪೆಸಿಫಿಕೇಶನ್ಸ್
ಪರ್ಫಾಮೆನ್ಸ್ | Mediatek MT6765 Helio P35 (12nm) |
ಸ್ಟೋರೇಜ್ | 128 GB |
ಬ್ಯಾಟರಿ | 4500 mAh |
ಭಾರತದಲ್ಲಿ ಬೆಲೆ | 21687 |
ಡಿಸ್ಪ್ಲೇ | 6.52 inches (16.56 cm) |
ರ್ಯಾಮ್ | 4 GB |
Oppo A17 With 5000mah Battery Launched Price In India, Specifications.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm