ಬ್ರೇಕಿಂಗ್ ನ್ಯೂಸ್
16-11-22 07:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಆಪಲ್ ಐಫೋನ್ ಸ್ಮಾರ್ಟ್ಫೋನ್ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಬೆಂಗಳೂರು ನಗರದ ಸಮೀಪವಿರುವ ಹೊಸೂರಿನಲ್ಲಿ ಆರಂಭವಾಗಲಿದೆ ಎಂದು ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. ಮಂಗಳವಾರದಂದು ನಡೆದ ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಈ ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಆಪಲ್ ಐಫೋನ್ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್ ಶಿಘ್ರದಲ್ಲೇ ಐಫೋನ್ಗಳನ್ನು ತಯಾರಿಲಿದೆ. ಈ ಒಂದೇ ಘಟಕದಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ. ಈ 60,000 ಉದ್ಯೋಗಿಗಳಲ್ಲಿ ಮೊದಲ 6,000 ಉದ್ಯೋಗಿಗಳು ರಾಂಚಿ ಮತ್ತು ಹತ್ತಿರದ ಸ್ಥಳಗಳ ಹಜಾರಿಬಾಗ್ ಬುಡಕಟ್ಟು ಸಹೋದರಿಯರು ಇರಲಿದ್ದಾರೆ. ಆದ್ದರಿಂದ, ಹಜಾರಿಬಾಗ್ ಸಹೋದರಿಯರಿಗೆ ಆಪಲ್ ಐಫೋನ್ ತಯಾರಿಕೆಯ ತರಬೇತಿ ನೀಡಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಚೀನಾದಲ್ಲಿನ ಕೋವಿಡ್ ನಿರ್ಬಂಧಗಳು, ರಾಜಕೀಯ ಸಮಸ್ಯೆಗಳು ಮತ್ತು ಆರ್ಥಿಕ ಚಟುವಟಿಕೆ ಕುಸಿತದ ಪರಿಣಾಮಗಳು ಆಪಲ್ ಕಂಪೆನಿಯ ಮೇಲೆ ನೇರ ಪರಿಣಾಮ ಬೀರಿವೆ. ಈ ಆಂತಕಗಳ ನಡುವೆ ಚೀನಾದಲ್ಲಿ ಐಫೋನ್ಗಳ ಉತ್ಪಾದನೆ ಮತ್ತು ಪೂರೈಕೆ ಕಷ್ಟ ಸಾಧ್ಯ. ಭವಿಷ್ಯದಲ್ಲೂ ಈ ಸಮಸ್ಯೆಗಳಿಗೆ ಕೊನೆ ಇಲ್ಲ ಎಂದರಿತಿರುವ ಆಪಲ್ ಸಂಸ್ಥೆ ಭಾರತದಲ್ಲಿ ಹೆಚ್ಚು ಐಫೋನ್ಗಳನ್ನು ಉತ್ಪಾದಿಸುವ ಹಾಗೂ ರಫ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಕ್ಕಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಆಯ್ದುಕೊಂಡಿದೆ. ಪ್ರಸ್ತುತ ಭಾರತದಲ್ಲಿ ಫಾಕ್ಸ್ಕಾನ್ ಘಟಕದಲ್ಲಿ ಐಫೋನ್ಗಳನ್ನು ಉತ್ಪಾದಿಸಲಾಗುತ್ತಿದೆ.

ಇತ್ತೀಚಿಗಷ್ಟೆ, ಭಾರತದಲ್ಲಿ ಆಪಲ್ ಹೊಂದಿರುವ ಫಾಕ್ಸ್ಕಾನ್ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲು ಮತ್ತು ವಿಶ್ವದಾದ್ಯಂತ ರಪ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಲ್ಲದೇ, ಚೀನಾ ಮೇಲಿನ ತನ್ನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಆಪಲ್ ಭಾರತದಲ್ಲಿ ಕೆಲವು ಐಫೋನ್ 14 ಸರಣಿ ಸ್ಮಾರ್ಟ್ಫೋನ್ಗಳನ್ನು ಅಸೆಂಬಲ್ ಮಾಡಲಿದೆ ಎಂದು ಜನಪ್ರಿಯ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ತಮ್ಮ ಟ್ವೀಟ್ಗಳಲ್ಲಿ ಉಲ್ಲೇಖಿಸಿದ್ದರು. ಇತ್ತೀಚಿನ ಭೌಗೋಳಿಕ ರಾಜಕೀಯ ವಿಷಯಗಳ ಹಿನ್ನೆಲೆಯಲ್ಲಿ ಆಪಲ್ ಈ ತೀರ್ಮಾನಕ್ಕೆ ಬಂದಿದೆ ಎಂದು ಮಿಂಗ್-ಚಿ ಕುವೊ ಅವರು ಹೇಳಿದ್ದರು.
Biggest Iphone Manufacturing Unit To Come Up Near Bengaluru.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm