ಬ್ರೇಕಿಂಗ್ ನ್ಯೂಸ್
28-03-23 07:23 pm Source: Vijayakarnataka ಡಿಜಿಟಲ್ ಟೆಕ್
ಕಡಿಮೆ ಬೆಲೆಯಲ್ಲಿ ಉತ್ತಮ ಸ್ಮಾರ್ಟ್ಫೋನ್ ಒಂದನ್ನು ಖರೀದಿಸಲು ಇಚ್ಚಿಸುತ್ತಿರುವ ಗ್ರಾಹಕರಿಗಾಗಿ ಜನಪ್ರಿಯ ಮೊಬೈಲ್ ಬ್ರ್ಯಾಂಡ್ Infinix ದೇಶದಲ್ಲಿ ತನ್ನ ವಿನೂತನ Infinix Hot 30i ಸ್ಮಾರ್ಟ್ಫೋನನ್ನು ಬಿಡುಗಡೆಗೊಳಿಸಿದೆ. ಈ ಹೊಸ Infinix Hot 30i ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ G37 SoC ನಿಂದ ಚಾಲಿತವಾಗಿದ್ದು, ಜೊತೆಗೆ 10W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ, 50-ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 8GB RAM ಮತ್ತು 128GB ಆನ್ಬೋರ್ಡ್ ಮೆಮೊರಿಯಂತಹ ಹಲವಾರು ಪ್ರಮುಖ ವೈಶಿಷ್ಟ್ಯಗಳಲ್ಲಿ ಮಾರುಕಟ್ಟೆಗೆ ಬಂದಿದೆ. ಹಾಗಾದರೆ, ದೇಶದ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಹೊಸ Infinix Hot 30i ಸ್ಮಾರ್ಟ್ಫೋನ್ ಹೇಗಿದೆ ಮತ್ತು ಬೆಲೆ ಎಷ್ಟು ಎಂಬುದನ್ನು ನೋಡೋಣ ಬನ್ನಿ.
Infinix Hot 30i ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು.
ನೂತನ Infinix Hot 30i ಸ್ಮಾರ್ಟ್ಫೋನ್ 6.6-ಇಂಚಿನ ಫುಲ್-HD+ ಡಿಸ್ಪ್ಲೇ ಹೊಂದಿದ್ದು, ಇದು 90Hz ರಿಫ್ರೆಶ್ ರೇಟ್, 500 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಸಾಮರ್ಥ್ಯಗಳ ಜೊತೆಗೆ ಪಾಂಡ ಗ್ಲಾಸ್ ರಕ್ಷಣೆಯನ್ನು ಹೊಂದಿದೆ. ಕಾರ್ಯ ನಿರ್ವಹಣೆ ವಿಭಾಗದಲ್ಲಿ, 8GB RAM ಮತ್ತು 128GB ಆನ್ಬೋರ್ಡ್ ಮೆಮೊರಿಯೊಂದಿಗೆ ಜೋಡಿಸಲಾದ ಆಕ್ಟಾ-ಕೋರ್ 6nm MediaTek Helio G37 ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್ಫೋನ್ Android 12 ಆಧಾರಿತ ಇತ್ತೀಚಿನ XOS 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್ಫೋನಿನಲ್ಲಿ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಮೆಮೊರಿ ವಿಸ್ತರಣೆ ಮತ್ತು ಬಳಕೆಯಾಗದ ಸಂಗ್ರಹಣೆಯನ್ನು ಬಳಸಿಕೊಂಡು ಲಭ್ಯವಿರುವ ಮೆಮೊರಿಯನ್ನು ವಾಸ್ತವಿಕವಾಗಿ 16GB ವರೆಗೆ ವಿಸ್ತರಿಸಸಲು ಅವಕಾಶವಿದೆ.

ಕ್ಯಾಮೆರಾ ವಿಭಾಗದಲ್ಲಿ, Infinix Hot 30i ಸ್ಮಾರ್ಟ್ಫೋನ್ AI-ಬೆಂಬಲಿತ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಅಪಾರ್ಚರ್ನೊಂದಿಗೆ 50-ಮೆಗಾಪಿಕ್ಸೆಲ್ ಮುಖ್ಯ ಲೆನ್ಸ್ ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ. ಈ ಸ್ಮಾರ್ಟ್ಫೋನಿನ ಹಿಂಬದಿಯ ಮತ್ತು ಸೆಲ್ಫಿ ಎರಡೂ ಬದಿಯಲ್ಲಿ ಡ್ಯುಯಲ್-ಎಲ್ಇಡಿ ಫ್ಲ್ಯಾಷ್ ಮಾಡ್ಯೂಲ್ಗಳನ್ನು ನೀಡಲಾಗಿದೆ. ಸ್ಮಾರ್ಟ್ಫೋನ್ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, USB ಟೈಪ್-C ಪೋರ್ಟ್, ಬ್ಲೂಟೂತ್, OTG ಮತ್ತು Wi-Fi ವೈಶಿಷ್ಟ್ಯಗಳಿವೆ. ಇನ್ನುಳಿದಂತೆ, 10W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಹಾಗೂ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸಂವೇದಕದ ಜೊತೆಗೆ ಫೇಸ್ ಅನ್ಲಾಕಿಂಗ್ ಸೌಲಭ್ಯ ಸಹ ಬೆಂಬಲವಿದೆ.

Infinix Hot 30i ಸ್ಮಾರ್ಟ್ಫೋನ್ ಬೆಲೆ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ Infinix Hot ಸ್ಮಾರ್ಟ್ಫೋನ್ ಏಕೈಕ 8GB RAM + 128GB ಸ್ಟೋರೇಜ್ ಮಾದರಿಯಲ್ಲಿ 8,999 ರೂ. ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್ಫೋನ್ ಡೈಮಂಡ್ ವೈಟ್, ಗ್ಲೇಸಿಯರ್ ಬ್ಲೂ ಮತ್ತು ಮಿರರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಇದೇ ಏಪ್ರಿಲ್ 3 ರಿಂದ ಫ್ಲಿಪ್ಕಾರ್ಟ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರುತ್ತಿದ್ದು, ಗ್ರಾಹಕರು ಫ್ಲಿಪ್ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ಗಳ ಮೂಲಕ ಸಾಧನವನ್ನು ಖರೀದಿಸಿದರೆ ಶೇಕಡಾ 5% ಕ್ಯಾಶ್ಬ್ಯಾಕ್ ದೊರೆಯಲಿದೆ. ಆದರೆ, ಈ ಪರಿಚಯಾತ್ಮಕ ಕೊಡುಗೆಯ ಅವಧಿಯ ಬಗ್ಗೆ ಕಂಪೆನಿಯಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
infinix hot 30i smartphone launched in india price, specifications.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm