ಬ್ರೇಕಿಂಗ್ ನ್ಯೂಸ್
12-05-23 09:56 pm Source: Gizbot ಡಿಜಿಟಲ್ ಟೆಕ್
ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಸೋನಿ ಕಂಪೆನಿ ಮತ್ತೆ ಸೌಂಡ್ ಮಾಡಲು ಶುರುಮಾಡಿದೆ. ತನ್ನ ಹೊಸ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಬಿಡುಗಡೆ ಮಾಡುವ ಮೂಲಕ ಟೆಕ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಸ್ಮಾರ್ಟ್ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದ್ದು, Exmor T ಹೊಂದಿರುವುದು ಮೇನ್ ಹೈಲೈಟ್ ಆಗಿದೆ.
ಹೌದು, ಸೋನಿ ಕಂಪೆನಿ ಹೊಸದಾಗಿ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಡಿಸ್ಪ್ಲೇ
ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ 6.5 ಇಂಚಿನ OLED ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 21:9 ಸಿನಿಮಾವೈಡ್ 4K HDR ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದಲ್ಲದೆ ಡಿಸ್ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಕೂಡ ಬೆಂಬಲಿಸಲಿದೆ. ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಪ್ರೊಸೆಸರ್ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್
ಕ್ಯಾಮೆರಾ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಪಡೆದಿದೆ. ಮುಖ್ಯವಾಗಿ ಕ್ಯಾಮೆರಾ ಸೆಟ್ಟಾಪ್ನಲ್ಲಿ ಎಕ್ಸ್ಮೋರ್ ಟಿ ಸ್ಟ್ಯಾಕ್ಡ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಫೋನ್ ಮುಖ್ಯ ಕ್ಯಾಮೆರಾ 52-ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12-ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್ಫೋನ್ ತನ್ನ ಅಲ್ಟ್ರಾ-ವೈಡ್ ಕ್ಯಾಮೆರಾದಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್
ಬ್ಯಾಟರಿ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W (USB PD) ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್ಫೋನ್ ವೈರ್ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್ಲೆಸ್ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, 3.5 mm ಆಡಿಯೊ ಜಾಕ್ ಅನ್ನು ಬೆಂಬಲಿಸಲಿದೆ.
ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಬೆಲೆ ಮತ್ತು ಲಭ್ಯತೆ ಸೋನಿ ಎಕ್ಸ್ಪೀರಿಯಾ 1 V ಸ್ಮಾರ್ಟ್ಫೋನ್ ಯುರೋಪ್ ಮಾರುಕಟ್ಟೆಯಲ್ಲಿ 12GB RAM + 256GB ಸ್ಟೋರೇಜ್ ಆಯ್ಕೆಗೆ $1,399 (ಅಂದಾಜು 1,14,700ರೂ)ಬೆಲೆ ಹೊಂದಿದೆ. ಇದು ಹಸಿರು ಮತ್ತು ಕಪ್ಪು, ಪ್ಲಾಟಿನಂ ಬೆಳ್ಳಿ ಮತ್ತು ಖಾಕಿ ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
sony xperia 1 v with exmor t image sensor launched price and specs details.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm