ಬ್ರೇಕಿಂಗ್ ನ್ಯೂಸ್
05-07-23 06:42 pm Source: Gizbot ಡಿಜಿಟಲ್ ಟೆಕ್
ಐಕ್ಯೂ ಸಂಸ್ಥೆಯು ಇತ್ತೀಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್ಫೋನ್ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಇದೀಗ ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್ಫೋನ್ ಪ್ರಿ-ಆರ್ಡರ್ಗೆ ಅವಕಾಶ ಇದ್ದು, ಖರೀದಿದಾರರು ಇ ಕಾಮರ್ಸ್ ತಾಣ ಅಮೆಜಾನ್ ಹಾಗೂ ಅಧಿಕೃತ ಐಕ್ಯೂ ವೆಬ್ಸೈಟ್ ಮೂಲಕ ಪ್ರಿ-ಆರ್ಡರ್ ಮಾಡಬಹುದಾಗಿದೆ.
ಹೌದು, ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್ಫೋನ್ ಈಗ ಪ್ರಿ-ಆರ್ಡರ್ಗೆ ಲಭ್ಯ ಇದೆ. ಅಂದಹಾಗೆ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 8GB + 128GB ಮತ್ತು 12GB + 256GB ಆಗಿವೆ. ಇನ್ನು ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 34,999ರೂ. ಆಗಿದೆ. ಇದೇ ಜುಲೈ 15 ರಂದು ಅಮೆಜಾನ್ ಹಾಗೂ ಐಕ್ಯೂ ವೆಬ್ಸೈಟ್ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.

ಇನ್ನು ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8+ Gen 1 SoC ಪ್ರೊಸೆಸರ್ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಹೊಂದಿದೆ. ಇದರೊಂದಿಗೆ ಈ ಮೊಬೈಲ್ನ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಐಕ್ಯೂ ನಿಯೋ 7 ಪ್ರೊ 5G ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್ಫೋನ್ 6.78 ಇಂಚಿನ ಪೂರ್ಣ ಹೆಚ್ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಅನ್ನು ಪಡೆದಿದೆ. ಡಿಸ್ಪ್ಲೇಯು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದ್ದು, 120Hz ರಿಫ್ರೆಶ್ ರೇಟ್ ಮತ್ತು 300Hz ಟಚ್ ಸ್ಯಾಂಪ್ಲಿಂಗ್ ರೇಟ್ ಸಾಮರ್ಥ್ಯವನ್ನು ಒಳಗೊಂಡಿದೆ.

ಐಕ್ಯೂ ನಿಯೋ 7 ಪ್ರೊ 5G ಪ್ರೊಸೆಸರ್ ಪವರ್ ಯಾವುದು : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಐಕ್ಯೂ ನಿಯೋ 7 ಪ್ರೊ 5G ಕ್ಯಾಮೆರಾ ಸೆನ್ಸಾರ್ ಯಾವುದು : ಐಕ್ಯೂ ನಿಯೋ 7 ಪ್ರೊ 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್-ಲೆನ್ಸ್ ಅನ್ನು ಪಡೆದಿದೆ. ಹಾಗೆಯೇ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದರೊಂದಿಗೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ.
ಐಕ್ಯೂ ನಿಯೋ 7 ಪ್ರೊ 5G ಬ್ಯಾಟರಿ ಬ್ಯಾಕ್ಅಪ್ ಸಾಮರ್ಥ್ಯ ಏನು : ಐಕ್ಯೂ ನಿಯೋ 7 ಪ್ರೊ 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 120W ಫ್ಲ್ಯಾಶ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.2, GPS, GNSS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.
Iqoo neo 7 pro now available for pre order in India price and Specifications.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm