ಬ್ರೇಕಿಂಗ್ ನ್ಯೂಸ್
15-08-23 07:31 pm Source: Gizbot Kannada ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರ್ಯಾಂಡ್ನ ಫೋನ್ಗಳಿಗೆ ಭಾರಿ ಬೇಡಿಕೆಯಿದೆ. ವಿಭಿನ್ನ ಡಿಸೈನ್ ಹಾಗೂ ನವೀನ ಮಾದರಿಯ ವಿನ್ಯಾಸಕ್ಕೆ ರೆಡ್ಮಿ ಸ್ಮಾರ್ಟ್ಫೋನ್ಗಳು ಪ್ರಸಿದ್ಧಿ ಪಡೆದುಕೊಂಡಿವೆ. ಅದರ ಮುಂದುವರೆದ ಭಾಗವಾಗಿ ಇದೀಗ ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾದೊಂದಿಗೆ ಬರಲಿದೆ.
ಹೌದು, ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿ೯ದೆ. ಈ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಡಿಸ್ಪ್ಲೇ ರಚನೆ
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 2272 x 1220 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ.
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಪ್ರೊಸೆಸರ್ ಯಾವುದು?
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 24GB RAM ಮತ್ತು 1TB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಸಹ ಲಭ್ಯವಾಗಲಿದೆ. ಜೊತೆಗೆ ಈ ಡಿವೈಸ್ ವೈಲ್ಡ್ಬೂಸ್ಟ್ 2.0 ಟೆಕ್ನಾಲಜಿಯೊಂದಿಗೆ ಬರಲಿದ್ದು, ಸ್ಮಾರ್ಟ್ಫೋನ್ ಅನ್ನು 3 ಡಿಗ್ರಿ ಸೆಲ್ಸಿಯಸ್ನಿಂದ ತಂಪಾಗಿರಿಸುತ್ತದೆ ಎಂದು ಹೇಳಲಾಗಿದೆ.

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಕ್ಯಾಮೆರಾ ಸೆಟ್ಅಪ್
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ IMX800 ಸೋನಿ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಬ್ಯಾಟರಿ ಮತ್ತು ಇತರೆ
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ, ಬ್ಲೂಟೂತ್ 5.3 ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್ಫೋನ್ನಲ್ಲಿ ಹೆಡ್ಫೋನ್ ಜ್ಯಾಕ್ಗೆ ಅವಕಾಶ ನೀಡಿಲ್ಲ ಅನ್ನೋದು ಗಮನಿಸಬೇಕಾದ ವಿಚಾರವಾಗಿದೆ.

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಬೆಲೆ ಮತ್ತು ಲಭ್ಯತೆ
ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಈ ಸ್ಮಾರ್ಟ್ಫೋನ್ ಬೇಸ್ ಮಾಡೆಲ್ ಚೀನಾದಲ್ಲಿ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 2,599 (ಅಂದಾಜು 30,000ರೂ)ಬೆಲೆಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಫೋನ್ನ 16GB RAM + 256GB ಸ್ಟೋರೇಜ್ ಮಾದರಿಯ ಆಯ್ಕೆಯ ಬೆಲೆ CNY 2,799 (ಸುಮಾರು 32,000ರೂ)ಆಗಿದೆ. ಇನ್ನು ಇದರ ಟಾಪ್ ವೇರಿಯೆಂಟ್ 24GB RAM + 1TB ಸ್ಟೋರೇಜ್ ಮಾದರಿಯ ಬೆಲೆ CNY 3,599 (ಸುಮಾರು 41,200ರೂ)ಆಗಿದೆ. ಈ ಸ್ಮಾರ್ಟ್ಫೋನ್ ಭಾರತಕ್ಕೆ ಬರುವ ವಿಚಾರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Redmi K60 Ultra with 6 67 Inch Display Launched Details.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm