ಬ್ರೇಕಿಂಗ್ ನ್ಯೂಸ್
18-01-21 03:51 pm Source: GIZBOT ಡಿಜಿಟಲ್ ಟೆಕ್
ಬಹು ನಿರೀಕ್ಷಿತ ಒಪ್ಪೊ ರೆನೋ 5 ಪ್ರೊ 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಸದ್ಯ ಈ ಸ್ಮಾರ್ಟ್ಫೋನ್ ಅನ್ನು ಇಂದು ದೇಶದಲ್ಲಿ ಆನ್ಲೈನ್ ಈವೆಂಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿದ್ದ ರೆನೋ 4 ಪ್ರೊ ಸ್ಮಾರ್ಟ್ಫೋನ್ನ ಮುಂದುವರೆದ ಆವೃತ್ತಿ ಆಗಿದೆ. ಇನ್ನು ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಹೌದು, ಒಪ್ಪೊ ಕಂಪೆನಿ ತನ್ನ ಹೊಸ ಒಪ್ಪೊ ರೆನೊ 5 ಪ್ರೊ 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 5G ನೆಟ್ವರ್ಕ್ ಅನ್ನು ಬೆಂಬಲಿಸಲಿದ್ದು, ಭವಿಷ್ಯದ ದೃಷ್ಟಿಯಿಂದ ಹೊಸ ವಿನ್ಯಾಸದಲ್ಲಿ ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್ಫೋನ್ 6.5 ಇಂಚಿನ ಫುಲ್ ಹೆಚ್ಡಿ ಡಿಸ್ಪ್ಲೇ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ಅನ್ನು ಒಳಗೊಂಡಿದೆ.

ಡಿಸ್ಪ್ಲೇ
ರೆನೋ 5 ಪ್ರೊ 5G ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್-ಹೋಲ್ ಡಿಸ್ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಒಪ್ಪೊ ರೆನೋ 5 ಪ್ರೊ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4350mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದ್ದು, ಇದು 65W ವರೆಗೆ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ 40 ನಿಮಿಷಗಳಲ್ಲಿ ಬ್ಯಾಟರಿಯನ್ನು ಟಾಪ್ ಅಪ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, 3.5mm ಹೆಡ್ಫೋನ್ ಜ್ಯಾಕ್, ವೈಫೈ, ಬ್ಲೂಟೂತ್, ಹಾಟ್ಸ್ಪಾಟ್ ಆಯ್ಕೆಗಳನ್ನು ಬೆಂಬಲಿಸಲಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 5 ಪ್ರೊ 5G ಸಿಂಗಲ್ ಮೆಮೊರಿ ರೂಪಾಂತರದಲ್ಲಿ 8GB RAM ಮತ್ತು 128GB ಆಂತರಿಕ ಸಂಗ್ರಹಣೆಯನ್ನು ಹೊಂದಿದೆ. ಇದರ ಬೆಲೆ 35,990 ರೂ.ಆಗಿದೆ. ಇದು ಸ್ಟಾರಿ ಬ್ಲ್ಯಾಕ್ ಮತ್ತು ಆಸ್ಟ್ರಲ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದರ ಮೊದಲ ಸೇಲ್ ಜನವರಿ 22 ರಂದು ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ನಲ್ಲಿ ನಡೆಯಲಿದೆ.
This News Article is a Copy of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm