ಬ್ರೇಕಿಂಗ್ ನ್ಯೂಸ್
12-02-21 05:21 pm Source: GIZBOT Mutthuraju H M ಡಿಜಿಟಲ್ ಟೆಕ್
ರಿಯಲ್ಮಿ ಮೊಬೈಲ್ ಕಂಪನಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್ಮಿ X7 5Gಸ್ಮಾರ್ಟ್ಫೋನ್ ಆಕರ್ಷಕ ಫೀಚರ್ಸ್ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ ಇಂದು (ಫೆ.12) ಮಧ್ಯಾಹ್ನ 12ರಿಂದ ಇ-ಕಾಮರ್ಸ್ ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ ನಲ್ಲಿ ಫಸ್ಟ್ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 19,999ರೂ.ಗಳು ಆಗಿದೆ.
ಹೌದು, ರಿಯಲ್ಮಿ X7 5G ಸ್ಮಾರ್ಟ್ಫೋನ್ನ ಮೊದಲ ಮಾರಾಟ ಇಂದು ನಡೆಯಲಿದೆ. ಈ ಫೋನ್ ಹಿಂಬದಿಯಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್ ಬೆಂಬಲಿತ 4,310mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್ಫೋನ್ 6GB RAM ಮತ್ತು 128GB ಹಾಗೂ 8GB+128GB ವೇರಿಯಂಟ್ ಮಾದರಿ ಆಯ್ಕೆಯನ್ನು ಪಡೆದಿದೆ.
ಡಿಸ್ಪ್ಲೇ
ರಿಯಲ್ಮಿ X7 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.4 ಇಂಚಿನ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದ್ದು, AMOLED ಮಾದರಿಯಲ್ಲಿದೆ. ಡಿಸ್ಪ್ಲೇಯ ಅನುಪಾತವು 20:9 ಆಗಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಪಡೆದಿದೆ. ಹಾಗೆಯೇ 600nits ಬ್ರೈಟ್ನೆಸ್ ಪಡೆದಿದೆ.
ಪ್ರೊಸೆಸರ್
ರಿಯಲ್ಮಿ X7 5G ಸ್ಮಾರ್ಟ್ಫೋನ್ ಮೀಡಿಯಾ ಟೆಕ್ Dimensity 800U 5G SoC ಪ್ರೊಸೆಸರ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB + 128GB ಮತ್ತು 8GB + 128GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.
ಕ್ಯಾಮೆರಾ ವಿಶೇಷ
ರಿಯಲ್ಮಿ X7 5G ಸ್ಮಾರ್ಟ್ಫೋನ್ ಹಿಂಬದಿಯಲ್ಲಿ ಮೂರು ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಮತ್ತು ಇತರೆ ಫೀಚರ್ಸ್
ರಿಯಲ್ಮಿ X7 5G ಸ್ಮಾರ್ಟ್ಫೋನ್ 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್ ಅನ್ನು ಒಳಗೊಂಡಿದೆ.
ಬೆಲೆ ಮತ್ತು ಇತರೆ
ರಿಯಲ್ಮಿ X7 ಸ್ಮಾರ್ಟ್ಫೋನ್ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 19,999 ರೂ. ಆಗಿದೆ. ಹಾಗೆಯೇ 8GB + 128GB ಬೆಲೆಯು 21,999ರೂ. ಆಗಿದೆ. ನೆಬುಲಾ ಹಾಗೂ ಸ್ಪೆಸ್ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ. ಇಂದಿನಿಂದ ಫ್ಲಿಪ್ಕಾರ್ಟ್ ಹಾಗೂ ರಿಯಲ್ಮಿ ಅಧಿಕೃತ ವೆಬ್ಸೈಟ್ ಮೂಲಕ ಫಸ್ಟ್ ಸೇಲ್ ಆರಂಭಿಸಲಿದೆ. ಇದಲ್ಲದೆ ನೀವು ಐಸಿಐಸಿಐ ಬ್ಯಾಂಕ್ ಕಾರ್ಡ್ನ ಗ್ರಾಹಕರಾಗಿದ್ದರೆ, ರಿಯಲ್ಮಿ ಆನ್ಲೈನ್ ಸ್ಟೋರ್ನಲ್ಲಿ ರಿಯಲ್ಮಿ X7 ಖರೀದಿಸುವಾಗ ನೀವು ರೂ .2,000 ಫ್ಲಾಟ್ ರಿಯಾಯಿತಿ ಪಡೆಯಬಹುದು. ಅಲ್ಲದೆ, ಆಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ, ಫ್ಲಿಪ್ಕಾರ್ಟ್ನಲ್ಲಿ ಮಾಡಿದ ಖರೀದಿಗೆ ನೀವು 1,500 ರೂ. ಎರಡೂ ಪ್ಲಾಟ್ಫಾರ್ಮ್ಗಳಲ್ಲಿ ಕಾರ್ಡ್ ಬಳಸಿ ಮಾಡಿದ ಇಎಂಐ ವಹಿವಾಟುಗಳಿಗೆ ಈ ರಿಯಾಯಿತಿಗಳು ಅನ್ವಯವಾಗುತ್ತವೆ. ಇದಲ್ಲದೆ ಫ್ಲಿಪ್ಕಾರ್ಟ್ ಸ್ಮಾರ್ಟ್ ಅಪ್ಗ್ರೇಡ್ನ ವೈಯಕ್ತಿಕಗೊಳಿಸಿದ ಆವೃತ್ತಿಯಾದ ಹೊಸ ರಿಯಲ್ಮಿ ಅಪ್ಗ್ರೇಡ್ ಪ್ರೋಗ್ರಾಂ ಅಡಿಯಲ್ಲಿ, ನೀವು ಎಕ್ಸ್ 7 ಅನ್ನು ಕ್ರಮವಾಗಿ 13,999 ರೂಗಳಿಗೆ ಮತ್ತು 6 ಜಿಬಿ ಮತ್ತು 8 ಜಿಬಿ ರ್ಯಾಮ್ ರೂಪಾಂತರಗಳಿಗೆ 15,399 ರೂಗಳನ್ನು ಪಡೆದುಕೊಳ್ಳಬಹುದು.
This News Article is a Copy of GIZBOT
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm