ಬ್ರೇಕಿಂಗ್ ನ್ಯೂಸ್
16-02-21 10:29 am Source: GIZBOT Manthesh ಡಿಜಿಟಲ್ ಟೆಕ್
ಪೊಕೊ ಸಂಸ್ಥೆಯ ಹೊಸ ಪೊಕೊ M3 ಸ್ಮಾರ್ಟ್ಫೋನ್ ಇದೇ ಫೆ.9 ರಂದು ಫಸ್ಟ್ ಸೇಲ್ ಕಂಡಿದ್ದು, ಒಂದೇ ದಿನದಲ್ಲಿ ದಾಖಲೆಯ ಮಾರಾಟ ಕಂಡಿದೆ. ಇ-ಕಾಮರ್ಸ್ ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ ನಲ್ಲಿ ಇಂದು (ಫೆ.16) ಮತ್ತೆ ಪೊಕೊ M3 ಸ್ಮಾರ್ಟ್ಫೋನ್ ಸೇಲ್ ಆರಂಭವಾಗಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ ವೇರಿಯಂಟ್ ಬೆಲೆಯು 10,999ರೂ.ಗಳು ಆಗಿದೆ.
ಹೌದು, ಫ್ಲಿಪ್ಕಾರ್ಟ್ ತಾಣದಲ್ಲಿ ಪೊಕೊ M3 ಸ್ಮಾರ್ಟ್ಫೋನ್ ಇಂದು ಮತ್ತೆ ಮಾರಾಟ ಕಾಣಲಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್ ಬೆಂಬಲಿತ 6,000mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್ಫೋನ್ 6GB RAM ಮತ್ತು 64GB ವೇರಿಯಂಟ್ ಮಾದರಿ ಆಯ್ಕೆಯನ್ನು ಪಡೆದಿದೆ.

ಡಿಸ್ಪ್ಲೇ ರಚನೆ
ಪೊಕೊ M3 ಸ್ಮಾರ್ಟ್ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಯಾವುದು
ಪೊಕೊ M3 ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್ಅಪ್
ಪೊಕೊ M3 ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಪೊಕೊ M3 ಸ್ಮಾರ್ಟ್ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-ಸಿ, ಮತ್ತು 3.5mm ಹೆಡ್ಫೋನ್ ಜ್ಯಾಕ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ. ಇನ್ನು ಈ ಫೋನ್ ಕೂಲ್ ಬ್ಲೂ, ಪೊಕೊ ಯೆಲ್ಲೊ ಮತ್ತು ಪವರ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm