ಬ್ರೇಕಿಂಗ್ ನ್ಯೂಸ್
05-05-21 05:02 pm Source: GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ರಿಯಲ್ಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ರಿಯಲ್ಮಿ C11 (2021) ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಬಿಡುಗಡೆಯಾಗಿದ್ದ ರಿಯಲ್ಮಿ C11 ಸ್ಮಾರ್ಟ್ಫೋನ್ನ ತಿರುಚಿದ ರೂಪಾಂತರವಾಗಿದೆ.
ಹೌದು, ರಿಯಲ್ಮಿ ಸಂಸ್ಥೆ ಹೊಸ ರಿಯಲ್ಮಿ C11 (2021) ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಅನ್ನು ರಷ್ಯಾ ಮತ್ತು ಫಿಲಿಪೈನ್ಸ್ನಲ್ಲಿ ಇ-ಕಾಮರ್ಸ್ ಸೈಟ್ಗಳಲ್ಲಿ ಪಟ್ಟಿ ಮಾಡಲಾಗಿದೆ. ಇನ್ನು ಈ ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದು ಯುನಿಸಾಕ್ SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಡಿಸ್ಪ್ಲೇ
ರಿಯಲ್ಮಿ C11 (2021) ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್ಡಿ + ಎಲ್ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು ವಾಟರ್ಡ್ರಾಪ್-ಸ್ಟೈಲ್ ನಾಚ್ ವಿನ್ಯಾಸವನ್ನು ಹೊಂದಿದೆ. ಅಲ್ಲದೆ ಈ ಡಿಸ್ಪ್ಲೇ 60Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ಇದು ಮೈಸ್ಮಾರ್ಟ್ ಪ್ರೈಸ್ ಯುನಿಸಾಕ್ ಎಸ್ಸಿ 9863 SoC ಹೊಂದಿದೆ ಎಂದು ಹೇಳಲಾಗಿದ್ದು, ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್ಫೋನ್ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ರಿಯಲ್ಮಿ C11 (2021) ಸ್ಮಾರ್ಟ್ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ಮೈಕ್ರೋ ಯುಎಸ್ಬಿ ಪೋರ್ಟ್, ಯುಎಸ್ಬಿ ಒಟಿಜಿ, 4 ಜಿ, ಬ್ಲೂಟೂತ್, ವೈ-ಫೈ, ಯನ್ನು ಬೆಂಬಲಿಸಲಿದೆ

ಬೆಲೆ ಮತ್ತು ಲಭ್ಯತೆ
ರಿಯಲ್ಮಿ C11 (2021) ಸ್ಮಾರ್ಟ್ಫೋನ್ ರಷ್ಯಾ ಮತ್ತು ಫಿಲಿಪೈನ್ಸ್ನ ಅಧಿಕೃತ ಕಂಪನಿ ವೆಬ್ಸೈಟ್ಗಳಲ್ಲಿ ಇನ್ನೂ ಪಟ್ಟಿ ಮಾಡಲಾಗಿಲ್ಲ, ಆದರೆ ಫೋನ್ ಈಗ ರಷ್ಯಾದ ಅಲಿಎಕ್ಸ್ಪ್ರೆಸ್ ಮತ್ತು ಫಿಲಿಪೈನ್ಸ್ನ ಲಾಜಾಡಾದಲ್ಲಿ ಲಭ್ಯವಿದೆ. ಫಿಲಿಪೈನ್ಸ್ನಲ್ಲಿ, ಈ ಫೋನ್ನ ಬೆಲೆ ಪಿಎಚ್ಪಿ 4990 (ಸರಿಸುಮಾರು 7,600 ರೂ.) ಹೊಂದಿದೆ. ಈ ಸ್ಮಾರ್ಟ್ಫೋನ್ ಐರನ್ ಗ್ರೇ ಮತ್ತು ಲೇಕ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಫೋನ್ ಲಭ್ಯವಾಗಲಿದೆ.
This News Article Is A Copy Of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm