ಬ್ರೇಕಿಂಗ್ ನ್ಯೂಸ್
06-05-21 03:08 pm GIZBOT Mutthuraju H M ಡಿಜಿಟಲ್ ಟೆಕ್
ದಕ್ಷಿಣ ಕೋರಿಯಾದ ಜನ್ರಪಿಯ ಸ್ಮಾರ್ಟ್ಫೋನ್ ಕಂಪೆನಿ ಸ್ಯಾಮ್ಸಂಗ್ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ ಎ ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ ಸರಣಿಯನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ ಎಂದು ಹೇಳಲಾಗ್ತಿದೆ. ಸದ್ಯ ಲಭ್ಯ ಮಾಹಿತಿಯ ಪ್ರಕಾರ ಎ ಸರಣಿಯಲ್ಲಿ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ ಪರಿಚಯಿಸಲಿದೆ ಎಂದು ಹೇಳಲಾಗ್ತಿದೆ.
ಹೌದು, ಸ್ಯಾಮ್ಸಂಗ್ ಸಂಸ್ಥೆ ತನ್ನ ಹೊಸ ಸ್ಮಾರ್ಟ್ಫೋನ್ ಗ್ಯಾಲಕ್ಸಿ A82 5G ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ ಹೆಸರನ್ನು ಕಂಪನಿಯು ಅಧಿಕೃತ ಭದ್ರತಾ ನವೀಕರಣ ವೆಬ್ಸೈಟ್ನಲ್ಲಿ ಉಲ್ಲೇಖಿಸಿ ದೃಡಪಡಿಸಿದೆ. ಇನ್ನು ಈ ಸ್ಮಾರ್ಟ್ಫೋನ್ ಬಿಡುಗಡೆ ದಿನಾಂಕದ ಬಗ್ಗೆ ಯಾವುದೆ ಮಾಹಿತಿ ಲಭ್ಯವಾಗಿಲ್ಲ.
ಸ್ಯಾಮ್ಸಂಗ್ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ 1440 x 3200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಕ್ವಾಡ್ ಎಚ್ಡಿ + ಡೈನಾಮಿಕ್ ಅಮೋಲೆಡ್ 2x ಡಿಸ್ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್ಪ್ಲೇ 392 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ ಎನ್ನಲಾಗಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 855+ ಚಿಪ್ಸೆಟ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 1TB ವರೆಗೆ ಹೆಚ್ಚುವರಿ ಸಂಗ್ರಹ ಸ್ಥಳವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ
ಸ್ಯಾಮ್ಸಂಗ್ ಗ್ಯಾಲಕ್ಸಿ A82 5G ಸ್ಮಾರ್ಟ್ಫೋನ್ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್ಫೋನ್ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್, ಎನ್ಎಫ್ಸಿ, ಸ್ಯಾಮ್ಸಂಗ್ ಪೇ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಈ ಸ್ಮಾರ್ಟ್ಫೋನ್ ಬೆಲೆ ಎಷ್ಟಿರಲಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ.
(Kannada Copy of Gizbot Kannada)
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm