ಬ್ರೇಕಿಂಗ್ ನ್ಯೂಸ್
07-05-21 03:05 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಒಪ್ಪೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸ್ಮಾರ್ಟ್ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ಒಪ್ಪೋ K9 5G ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 768G SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ಒಳಗೊಂಡಿದೆ.
ಹೌದು, ಒಪ್ಪೋ ಸಂಸ್ಥೆ ಒಪ್ಪೋ K9 5G ಸ್ಮಾರ್ಟ್ಫೋನ್ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ 6.43 ಇಂಚಿನ ಫುಲ್-ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೊ K9 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್-ಹೆಚ್ಡಿ+ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. 91.7% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ಡಿಸ್ಪ್ಲೇ ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್ಪ್ಲೇ 410ಪಿಪಿಪಿ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 768G SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ಒಪ್ಪೋ K9 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5, 5G, ಬ್ಲೂಟೂತ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದು ಅಂಡರ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.
ಬೆಲೆ ಮತ್ತು ಲಭ್ಯತೆ
ಒಪ್ಪೋ K9 5G ಸ್ಮಾರ್ಟ್ಫೋನ್ 8GB RAM + 128GB ಶೇಖರಣಾ ರೂಪಾಂತರದ ಬೆಲೆ ಸಿಎನ್ವೈ 1,899 (ಸರಿಸುಮಾರು ರೂ. 21,600), ಮತ್ತು 8GB RAM + 256GB ಶೇಖರಣಾ ಮಾದರಿಯನ್ನು ಸಿಎನ್ವೈ 2,199 (ಸರಿಸುಮಾರು 25 ಸಾವಿರ ರೂ.) ಬೆಲೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್ಫೋನ್ ಮೇ 11 ರಿಂದ ಕಪ್ಪು ಮತ್ತು ಗ್ರೇಡಿಯಂಟ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಭಾರತದಲ್ಲಿ ಯಾವಾಗ ಲಬ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
(Kannada Copy of Gizbot Kannada)
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm