ಬ್ರೇಕಿಂಗ್ ನ್ಯೂಸ್
08-05-21 01:48 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ರಿಯಲ್ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ.; ಸದ್ಯ ಇದೀಗ ತನ್ನ ವಿ-ಸರಣಿ ಶ್ರೇಣಿಗೆ ಹೊಸ ಸ್ಮಾರ್ಟ್ಫೋನ್ ಸೇರಿಸಲು ಸಜ್ಜಾಗಿದೆ. ಚೀನಾದ ವೆಬ್ಸೈಟ್ ಟಿಪ್ಸ್ಟರ್ ಮಾಹಿತಿ ಪ್ರಕಾರ ಈ ಸ್ಮಾರ್ಟ್ಫೋನ್ ಅನ್ನು ರಿಯಲ್ಮಿ ವಿ 25 ಎಂದು ಹೆಸರಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 768G ಪ್ರೊಸೆಸರ್ ಬಲವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ.
ಹೌದು, ರಿಯಲ್ಮಿ ಸಂಸ್ಥೆ ಹೊಸ ರಿಯಲ್ಮಿ V25 ಸ್ಮಾರ್ಟ್ಫೋನ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ 6.43 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಗಿದೆ. ಜೊತೆಗೆ 32ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆ ಇದೆ.

ಡಿಸ್ಪ್ಲೇ
ರಿಯಲ್ಮಿ V25 ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಪ್ರೆಶ್ ರೇಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 768G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB, 8GB, 12GB RAM ಮತ್ತು 128GB ಹಾಗೂ 256GB ಇಂಟರ್ ಸ್ಟೋರೇಜ್ ಆಯ್ಕೆಗಳನ್ನು ಹೊಂದಿರುವ ಸಾದ್ಯತೆ ಇದೆ.

ಕ್ಯಾಮೆರಾ ವಿಶೇಷ
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾಧ್ಯತೆ ಇದೆ. ಇದು ಪೂರ್ತಿ ಬ್ಯಾಟರಿಯನ್ನು ಚಾರ್ಜ್ ಮಾಡಲು 35 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5, 5ಜಿ, ಬ್ಲೂಟೂತ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್ಫೋನ್ ಯಾವಾಗ ಲಭ್ಯವಾಗಿದೆ. ಇದರ ಬೆಲೆ ಏನಿರಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
(Kannada Copy of Gizbot Kannada)
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm