ಬ್ರೇಕಿಂಗ್ ನ್ಯೂಸ್
19-05-21 05:36 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ವಿವೋ Y52 5G ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ವಿವೋ ಕಂಪೆನಿ ಹೊಸ ವಿವೋ Y52 5G ಸ್ಮಾರ್ಟ್ಫೋನ್ ಅನ್ನು ಯುರೋಪ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ 6.58-ಇಂಚಿನ ಫುಲ್-ಹೆಚ್ಡಿ +ಡಿಸ್ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ವಿಶೇಷ
ವಿವೋ Y52 5G ಸ್ಮಾರ್ಟ್ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58-ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 84.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್ಪ್ಲೇ 20:9 ರಚನೆಯ ಅನುಪಾತ ಹೊಂದಿದೆ.

ಪ್ರೊಸೆಸರ್
ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಜೊತೆಗೆ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ವಿವೋ Y52 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, 3.5 ಎಂಎಂ ಹೆಡ್ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್ಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ವಿವೊ Y52 5G ಸ್ಮಾರ್ಟ್ಫೋನ್ ಬೆಲೆ ಮತ್ತು ಲಭ್ಯತೆಯನ್ನು ವಿವೋ ಇನ್ನೂ ಹಂಚಿಕೊಂಡಿಲ್ಲ. ಆದರೆ ಇದು ಯೂರೋ 299 (ಸುಮಾರು ರೂ. 26,700) ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ. ಭಾರತದಲ್ಲಿ ಈ ಸ್ಮಾರ್ಟ್ಫೋನ್ ಯಾವಾಗ ಲಭ್ಯವಾಗಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
(Kannada Copy of Gizbot Kannada)
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:40 am
HK News Staffer
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm