ಬ್ರೇಕಿಂಗ್ ನ್ಯೂಸ್
20-05-21 04:46 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಇನ್ಫಿನಿಕ್ಸ್ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸ್ಮಾರ್ಟ್ಫೋನ್ ಪ್ರಿಯರ ಗಮನ ಸೆಳೆದಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ ಅನ್ನು ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೋ G 85 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.
ಹೌದು, ಇನ್ಫಿನಿಕ್ಸ್ ಕಂಪೆನಿ ಹೊಸ ಇನ್ಫಿನಿಕ್ಸ್ ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 6.82-ಇಂಚಿನ ಎಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಡಿಸ್ಪ್ಲೇ ವಿಶೇಷ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ 720x1,640 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82-ಇಂಚಿನ ಹೆಚ್ಡಿ + ಐಪಿಎಸ್-ಎಲ್ಸಿಡಿ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಈ ಡಿಸ್ಪ್ಲೇ 20.5:9 ರಚನೆಯ ಅನುಪಾತ, 440 ನಿಟ್ಸ್ ಗರಿಷ್ಠ ಬ್ರೈಟ್ನೆಸ್, 1500: 2 ಕಾಂಟ್ರಾಸ್ಟ್ ಅನುಪಾತ ಮತ್ತು 90.66 ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.
ಪ್ರೊಸೆಸರ್
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ ಮೀಡಿಯಾ ಟೆಕ್ ಹಿಲಿಯೊ G85SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11-ಬಾಸ್ಡ್ ಎಕ್ಸ್ಒಎಸ್ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಡೆಪ್ತ್ ಲೆನ್ಸ್ ಮತ್ತು ಮತ್ತೊಂದು ಎಐ ಲೆನ್ಸ್ ಒಳಗೊಂಡಿದೆ. ಕ್ಯಾಮೆರಾ ವೈಶಿಷ್ಟ್ಯಗಳಲ್ಲಿ ಕ್ವಾಡ್ ಎಲ್ಇಡಿ ಫ್ಲ್ಯಾಷ್, ಪೋರ್ಟ್ರೇಟ್ ಮೋಡ್, ನೈಟ್ ಮೋಡ್, ಎಚ್ಡಿಆರ್, ಪೋರ್ಟ್ರೇಟ್ ಹೆಚ್ಡಿಆರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್ಫೋನ್ 52 ಗಂಟೆಗಳ 4G ಟಾಕ್ ಟೈಮ್, 76 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಮತ್ತು 27 ಗಂಟೆಗಳ ವಿಡಿಯೋ ಪ್ಲೇಬ್ಯಾಕ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್
ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 10s ಸ್ಮಾರ್ಟ್ಫೋನ್ ಭಾರತದಲ್ಲಿ 4GB RAM+64GB ಶೇಖರಣಾ ಆಯ್ಕೆಗೆ 9,999 ರೂ. ಮತ್ತು 6GB RAM+ 64GB ಶೇಖರಣಾ ಆಯ್ಕೆಗೆ 10,999 ರೂ.ಬೆಲೆಯನ್ನು ಹೊಂದಿದೆ. ಇದು ಮೊರಾಂಡಿ ಪರ್ಪಲ್, 7-ಡಿಗ್ರಿ ಪರ್ಪಲ್, ಹಾರ್ಟ್ ಆಫ್ ಓಷನ್, ಮತ್ತು 95-ಡಿಗ್ರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬಿಡುಗಡೆ ಯಾಗಿದೆ. ಈ ಫೋನ್ ಇದೇ ಮೇ 27 ರಿಂದ ಮಧ್ಯಾಹ್ನ 12 ರಿಂದ ಭಾರತದ ಫ್ಲಿಪ್ಕಾರ್ಟ್ನಲ್ಲಿ ಮಾರಾಟವಾಗಲಿದೆ. ಮೊದಲ ಮಾರಾಟದ ಸಮಯದಲ್ಲಿ 500 ರೂ.ಗಳ ರಿಯಾಯಿತಿ ಕೂಡ ದೊರೆಯಲಿದೆ.
(Kannada Copy of Gizbot Kannada)
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 09:25 pm
Mangalore Correspondent
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm