ಬ್ರೇಕಿಂಗ್ ನ್ಯೂಸ್
11-06-21 12:12 pm GIZBOT Mantesh ಡಿಜಿಟಲ್ ಟೆಕ್
ಜಾಗತಿಕ ಮೊಬೈಲ್ ಮಾರುಕಟ್ಟೆಯಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲೊಂದಾಗಿ ಗುರುತಿಸಿಕೊಂಡಿರುವ ಒನ್ಪ್ಲಸ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅಧಿಕೃತ ಇಂದು (ಜೂ.10) ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 750G ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಜೊತೆಗೆ 4,500mAh ಬ್ಯಾಟರಿ ಬ್ಯಾಕ್ಅಪ್ ಒಳಗೊಂಡಿರುವುದು ಪ್ರಮುಖ ಹೈಲೈಟ್ ಆಗಿ ಕಾಣಿಸಿಕೊಂಡಿದೆ.
ಹೌದು, ಒನ್ಪ್ಲಸ್ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ ಸರಣಿಯನ್ನು ಲಾಂಚ್ ಮಾಡಿದೆ. ಒನ್ಪ್ಲಸ್ ನಾರ್ಡ್ CE 5G ಫೋನ್ Fluid AMOLED ಡಿಸ್ಪ್ಲೇಯನ್ನು ಒಳಗೊಂಡಿದೆ. ಇದರೊಂದಿಗೆ 6GB/128GB, 8GB/128GB ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗಾದರೇ ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ ಇತರೆ ಫೀಚರ್ಸ್ಗಳೇನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್ಪ್ಲೇ ರಚನೆ
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್ಪ್ಲೇಯನ್ನು ಹೊಂದಿದ್ದು, ಡಿಸ್ಪ್ಲೇಯ ಅನುಪಾತವು 20:9 ಆಗಿದೆ. ಪ್ರತಿ ಪಿಕ್ಸಲ್ನ ಸಾಂದ್ರತೆಯು 408ppi ಆಗಿದ್ದು, 90Hz ಸ್ಕ್ರೀನ್ ರೀಫ್ರೇಶ್ ರೇಟ್ ಹೊಂದಿದೆ.
ಪ್ರೊಸೆಸರ್ ಕಾರ್ಯ
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗನ್ 750G ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 11 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ಗಳು ಮೂರು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 6GB/128GB, 8GB/128GB ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಾಗಿವೆ.
ಕ್ಯಾಮೆರಾ ಸೆನ್ಸಾರ್
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಪವರ್
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇನ್ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಹಾಗೂ ಫೇಸ್ ಅನ್ಲಾಕ್ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 802.11 ಎ / ಬಿ / ಜಿ / ಎನ್ / ಎಸಿ, ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್, ಎನ್ಎಫ್ಸಿ, ಗ್ಲೋನಾಸ್, ನಾವಿಕ್, ಯುಎಸ್ಬಿ ಟೈಪ್-ಸಿ ಪೋರ್ಟ್, ಡ್ಯುಯಲ್ ಸಿಮ್ ಬೆಂಬಲ ಮತ್ತು ಹೆಚ್ಚಿನವುಗಳು ಸೇರಿವೆ.
ಬೆಲೆ ಎಷ್ಟು?
ಒನ್ಪ್ಲಸ್ ನಾರ್ಡ್ CE 5G ಸ್ಮಾರ್ಟ್ಫೋನ್ 6GB RAM + 128GB ವೇರಿಯಂಟ್ ಬೆಲೆಯು 22,999ರೂ.ಗಳಾಗಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 24,999ರೂ. ಆಗಿದೆ. ಇನ್ನು 12GB RAM + 256GB ವೇರಿಯಂಟ್ ದರವು 27,999ರೂ. ಆಗಿದೆ. ಈ ಫೋನ್ ಬ್ಲೂ, ಚಾರ್ಕೋಲ್ ಹಾಗೂ ಸಿಲ್ವರ್ ಬಣ್ಣಗಳ ಆಯ್ಕೆ ಪಡೆದಿದೆ.
(Kannada Copy of Gizbot Kannada)
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm