ಬ್ರೇಕಿಂಗ್ ನ್ಯೂಸ್
29-06-21 03:16 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್ಮಿಯು ಈಗಾಗಲೇ ನಾರ್ಜೋ ಸರಣಿಯಲ್ಲಿ ಹಲವು ಫೋನ್ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್ಮಿ, ರಿಯಲ್ಮಿ ನಾರ್ಜೊ 30 5G ಹಲವು ಆಕರ್ಷಕ ಫೀಚರ್ಸ್ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 5G ಸಪೋರ್ಟ್ ನೊಂದಿಗೆ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ನಲ್ಲಿದೆ.
ಹೌದು, ರಿಯಲ್ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನ್ ಬಜೆಟ್ ಪ್ರೈಸ್ಟ್ಯಾಗ್ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 90Hz ರೀಫ್ರೇಶ್ ರೇಟ್ ಒಳಗೊಂಡ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಡಿಸ್ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಪಡೆದಿದೆ. ಹೀಗಾಗಿ ಬಜೆಟ್ ದರದಲ್ಲಿ ಪೈಪೋಟಿ ನೀಡುವಂತ ಫೀಚರ್ಸ್ಗಳಿಂದ ಆಕರ್ಷಕ ಎನಿಸಿದೆ. ಹಾಗಾದರೇ ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನಿನ ಫಸ್ಟ್ ಲುಕ್ ಹೇಗಿದೆ?.. ಫೀಚರ್ಸ್ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್ಪ್ಲೇ ರಚನೆ
ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 90.5% ಸ್ಕ್ರೀನ್ ಟು ಬಾಡಿ ಅನುಪಾತ ಹೊಂದಿದೆ. ಈ ಡಿಸ್ಪ್ಲೇ 600 ನಿಟ್ಸ್ ಗರಿಷ್ಠ ಬ್ರೈಟ್ನೆಸ್ ಅನ್ನು ಪಡೆದುಕೊಂಡಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ಪವರ್ ಏನು
ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಅಧಿಕ RAM ಬಯಸುವ ಗ್ರಾಹಕರಿಗೆ ಈ ಫೋನ್ ಆಕರ್ಷಕ ಎನಿಸಲಿದೆ. ಪ್ರೊಸೆಸರ್ ವೇಗವು ಉತ್ತಮವಾಗಿದ್ದು, ಮಲ್ಟಿಟಾಸ್ಕ್ ಕೆಲಸಗಳು ಸರಾಗವಾಗಿ ನಡೆಯುತ್ತವೆ.

ಕ್ಯಾಮೆರಾ ಸೆನ್ಸಾರ್ ಹೇಗಿವೆ
ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಟ್ರಿಪಲ್ ಕ್ಯಾಮೆರಾ ಸೆಟ್ಅಪ್ ಹೊಂದಿದ್ದರು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ನಲ್ಲಿ ಗಮನ ಸೆಳೆದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು
ರಿಯಲ್ಮಿ ನಾರ್ಜೊ 30 5G ಸ್ಮಾರ್ಟ್ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಸ್ಟ್ಯಾಂಡ್ಬೈನಲ್ಲಿ ಒಂದು ತಿಂಗಳ ಕಾಲ ಉಳಿಯಬಹುದು, ಆನ್ಲೈನ್ ವೀಡಿಯೊಗಳನ್ನು 16 ಗಂಟೆಗಳ ಕಾಲ ನಿರಂತರವಾಗಿ ಸ್ಟ್ರೀಮ್ ಮಾಡಬಹುದು ಅಥವಾ ಒಂದೇ ಚಾರ್ಜ್ನಲ್ಲಿ 11 ಗಂಟೆಗಳ ಕಾಲ ಆಟಗಳನ್ನು ಆಡಲು ಬಳಸಬಹುದು ಎಂದು ರಿಯಲ್ಮಿ ಹೇಳಿಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ಮಿ ನಾರ್ಜೊ 30 5G ಭಾರತದಲ್ಲಿ 6GB RAM + 128GB ಶೇಖರಣಾ ಆಯ್ಕೆಗೆ 15,999 ರೂ. ಬೆಲೆ ಹೊಂದಿದೆ. ಇನ್ನು ಈ ಫೋನ್ ರೇಸಿಂಗ್ ಬ್ಲೂ ಮತ್ತು ರೇಸಿಂಗ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಬರಲಿದೆ. ರಿಯಲ್ಮಿ ನಾರ್ಜೋ 30 5G ಮೊದಲ ಮಾರಾಟ ಇದೇ ಜೂನ್ 30 ರಂದು ನಡೆಯಲಿದೆ. ಈ ಫೋನ್ ಫ್ಲಿಪ್ಕಾರ್ಟ್ ಮತ್ತು ಅಧಿಕೃತ ರಿಯಲ್ಮಿ.ಕಾಮ್ ನಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ ಮತ್ತು ಆಫ್ಲೈನ್ ಮಳಿಗೆಗಳಲ್ಲಿಯೂ ಲಭ್ಯವಿರುತ್ತವೆ.
(Kannada Copy of Gizbot Kannada)
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm