ಬ್ರೇಕಿಂಗ್ ನ್ಯೂಸ್
06-07-21 10:54 am GIZBOT Mutthuraju H M ಡಿಜಿಟಲ್ ಟೆಕ್
ಮೊಬೈಲ್ ಇಲ್ಲದೇ ಮನುಷ್ಯನನ್ನು ಕಲ್ಪನೆ ಮಾಡುವುದು ಕಷ್ಟ ಸಾಧ್ಯ ಎನಿಸುತ್ತದೆ. ಏಕೆಂದರೇ ಪ್ರತಿ ಕೆಲಸಕ್ಕೂ ಈಗ ಸ್ಮಾರ್ಟ್ಫೋನ್ ಪ್ರಮುಖ ಡಿವೈಸ್ ಆಗಿ ಗುರುತಿಸಿಕೊಂಡಿದೆ. ಈ ನಿಟ್ಟಿನಲ್ಲಿ ಮೊಬೈಲ್ ಸಂಸ್ಥೆಗಳು ಹೊಸ ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಲೇ ಸಾಗಿವೆ. ಆದರೆ ಮಾರುಕಟ್ಟೆಗೆ ಅನಾವರಣ ಆಗುವ ಎಲ್ಲ ಫೋನ್ಗಳು ಲೀಡಿಂಗ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವು ಫೋನ್ ಮಾತ್ರ ಲೀಡಿಂಗ್ನಲ್ಲಿ ಕಾಣಿಸಿಕೊಳ್ಳುತ್ತವೆ.
ಹೌದು, ಮಾರುಕಟ್ಟೆಗೆ ಹೊಸದಾಗಿ ಹಲವು ಫೋನ್ಗಳು ಎಂಟ್ರಿ ಪಡೆಯುತ್ತವೆ. ಅವುಗಳಲ್ಲಿ ಕೆಲವೊಂದು ಫೋನ್ಗಳ ಗ್ರಾಹಕರನ್ನು ಹೆಚ್ಚಾಗಿ ಆಕರ್ಷಿಸುತ್ತವೆ. ಇನ್ನು ಕೆಲವು ಫೋನ್ಗಳು ಸುದ್ದಿಯನ್ನೇ ಮಾಡುವುದಿಲ್ಲ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಸ್ಯಾಮ್ಸಂಗ್, ಶಿಯೋಮಿ, ಸೇರಿದಂತೆ ಬಜೆಟ್ ಬೆಲೆಯ ಫೋನ್ಗಳು ಹೆಚ್ಚು ಟ್ರೆಂಡಿಂಗ್ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಪ್ರಸ್ತುತ ಟ್ರೆಂಡಿಂಗ್ನಲ್ಲಿರುವ ಸ್ಮಾರ್ಟ್ಫೋನ್ಗಳು ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10 ಪ್ರೊ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್ಫೋನ್ 6.67 ಇಂಚಿನ ಫುಲ್ ಹೆಚ್ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 100% ಡಿಸಿಐ-ಪಿ 3 ವೈಡ್ ಕಲರ್ ಗ್ಯಾಮಟ್, HDR-10 ಬೆಂಬಲ ಮತ್ತು ಟಿವಿ ರೈನ್ಲ್ಯಾಂಡ್ ಕಡಿಮೆ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ರೆಡ್ಮಿ ನೋಟ್ 10
ರೆಡ್ಮಿ ನೋಟ್ 10 ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದ್ದು, ಸೂಪರ್ ಅಮೋಲೆಡ್ ಡಿಸ್ಪ್ಲೇ ಇದಾಗಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 678 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನುಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.
ಪೊಕೊ X3 ಪ್ರೊ
ಪೊಕೊ X3 ಪ್ರೊ ಸ್ಮಾರ್ಟ್ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 -ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 860 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM, 8GB RAM ಮತ್ತು 128GB, 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ
ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.8 ಇಂಚಿನ ಫುಲ್ ಎಡ್ಜ್ QHD+ ಪ್ಲಸ್ ಜೊತೆಗೆ ಡೈನಾಮಿಕ್ AMOLED ಡಿಸ್ಪ್ಲೇ ಹೊಂದಿದೆ. ಆಕ್ಟಾ ಕೋರ್ Exynos 2100 SoC (ಸ್ನ್ಯಾಪ್ಡ್ರಾಗನ್ 888) ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ OIS ಸಪೋರ್ಟ್ ಜೊತೆಗೆ 108ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ.
(Kannada Copy of Gizbot Kannada)
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
10-07-25 11:07 pm
HK News Desk
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm