ಬ್ರೇಕಿಂಗ್ ನ್ಯೂಸ್
16-08-21 02:23 pm Gizbot, Mutthuraju H M ಡಿಜಿಟಲ್ ಟೆಕ್
ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳಿಂದ ಗಮನ ಸೆಳೆದಿದೆ. ಈಗಾಗಲೇ ಹಲವು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿರುವ ಒಪ್ಪೋ ಇದೀಗ ಹೊಸ ಒಪ್ಪೋ A16s ಅನ್ನು ಲಾಂಚ್ ಮಾಡಿದೆ. ಈ ಹೊಸ ಸ್ಮಾರ್ಟ್ಫೋನ್ ಕೈಗೆಟುಕುವ ಸ್ಮಾರ್ಟ್ಫೋನ್ನಂತೆ Oppo A- ಸರಣಿಯ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದು ವಾಟರ್ಡ್ರಾಪ್ ಶೈಲಿಯ ಡಿಸ್ಪ್ಲೇ ನೋಚ್ ಮತ್ತು ಎರಡು ವಿಭಿನ್ನ ಬಣ್ಣದ ಆಯ್ಕೆಗಳೊಂದಿಗೆ ಬರಲಿದೆ.
ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A16s ಸ್ಮಾರ್ಟ್ಫೋನ್ ಅನ್ನು ಪರಿಚಯಿಸಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಫೋಟೋಗಳನ್ನು ವರ್ಧಿಸಲು AI ಬ್ಯೂಟಿಫಿಕೇಶನ್, ಬೆರಗುಗೊಳಿಸುವ ಮೋಡ್ ಮತ್ತು ಬೊಕೆ ಫಿಲ್ಟರ್ಗಳಂತಹ ಫ್ರೀ ಲೋಡ್ ಫೀಚರ್ಸ್ಗಳನ್ನು ಹೊಂದಿದೆ. ಅಲ್ಲದೆ ರಾತ್ರಿಯ ಚಾರ್ಜಿಂಗ್ ಅನ್ನು ರಕ್ಷಿಸಲು ಮತ್ತು ರಾತ್ರಿ-ಸಮಯದ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಲು ಮುಂಚಿತವಾಗಿ ಸ್ಥಾಪಿಸಲಾದ ವೈಶಿಷ್ಟ್ಯಗಳೂ ಇವೆ. ಹಾಗಾದ್ರೆ ಒಪ್ಪೋ A16s ಸ್ಮಾರ್ಟ್ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.
ಡಿಸ್ಪ್ಲೇ ವಿಶೇಷ
ಒಪ್ಪೋ A16s ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ HD+ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 20: 9 ಆಕಾರ ಅನುಪಾತ ಮತ್ತು 60Hz ರಿಫ್ರೆಶ್ ದರವನ್ನು ಹೊಂದಿದೆ. ಇದು ವಾಟರ್ಡ್ರಾಪ್ ಶೈಲಿಯ ಡಿಸ್ಪ್ಲೇ ನೋಚ್ ಅನ್ನು ಒಳಗೊಂಡಿದೆ.
ಪ್ರೊಸೆಸರ್
ಒಪ್ಪೋ A16s ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.
ಬ್ಯಾಟರಿ ಮತ್ತು ಇತರೆ
ಒಪ್ಪೋ A16s ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.0, GPS/ A-GPS, NFC, USB Type-C, ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.
ಬೆಲೆ ಮತ್ತು ಲಭ್ಯತೆ
ಒಪ್ಪೋ A16s ಸ್ಮಾರ್ಟ್ಫೋನ್ ಏಕೈಕ 4GB RAM + 64GB ಮಾದರಿಗೆ ಬೆಲೆ ಯೂರೋ 149 (ಸರಿಸುಮಾರು ರೂ. 13,000)ಗೆ ನಿಗದಿಪಡಿಸಲಾಗಿದೆ. ಇದು ಸ್ಮಾರ್ಟ್ಫೋನ್ ಕ್ರಿಸ್ಟಲ್ ಬ್ಲಾಕ್ ಮತ್ತು ಪರ್ಲ್ ಬ್ಲೂ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ ಮತ್ತು ಪ್ರಸ್ತುತ ನೆದರ್ಲ್ಯಾಂಡ್ಸ್ ನಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಇತರ ಮಾರುಕಟ್ಟೆಗಳಲ್ಲಿ ಇದರ ಲಭ್ಯತೆ ಮತ್ತು ಬೆಲೆಯ ಬಗ್ಗೆ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ
(Kannada Copy of Gizbot Kannada)
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am