ಬ್ರೇಕಿಂಗ್ ನ್ಯೂಸ್
21-09-21 02:43 pm Gizbot, Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಒಪ್ಪೋ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳಿಂದ ಗುರುತಿಸಿಕೊಂಡಿದೆ. ಇನ್ನು ಒಪ್ಪೋ ಕಂಪೆನಿಯ ಒಪ್ಪೋ A54 ಮತ್ತು ಒಪ್ಪೋ F19 ಸ್ಮಾರ್ಟ್ಫೋನ್ ಗಳು ತಮ್ಮ ಫೀಚರ್ಸ್ಗಳಿಂದ ಗಮನ ಸೆಳೆದಿವೆ. ಸದ್ಯ ಇದೀಗ ಈ ಎರಡು ಸ್ಮಾರ್ಟ್ಫೋನ್ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಇನ್ನು ಈ ಎರಡು ಫೋನ್ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು ಪಂಚ್-ಹೋಲ್ ಡಿಸ್ಪ್ಲೇಯನ್ನು ಹೊಂದಿವೆ.
ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ A54 ಮತ್ತು ಒಪ್ಪೋ F19 ಸ್ಮಾರ್ಟ್ಫೋನ್ಗಳ ಬೆಲೆಯಲ್ಲಿ 1,000ರೂ.ಗಳಷ್ಟು ಹೆಚ್ಚಳ ಮಾಡಿದೆ. ಇದರಲ್ಲಿ ಒಪ್ಪೋ F19 ಸ್ಮಾರ್ಟ್ಫೋನ್ ಫುಲ್ HD+ ಅಮೋಲೆಡ್ ಡಿಸ್ಪ್ಲೇ ಮತ್ತು 48 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಒಳಗೊಂಡಿದೆ. ಇನ್ನು ಒನ್ಪ್ಲಸ್ A54 ಸ್ಮಾರ್ಟ್ಫೋನ್ HD+ LCD ಪ್ಯಾನಲ್ ಮತ್ತು 13-ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗಾದರೆ ಈ ಎರಡು ಸ್ಮಾರ್ಟ್ಫೋನ್ಗಳ ಬೆಲೆ ಹೆಚ್ಚಳ ನಂತರದ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A54 ಸ್ಮಾರ್ಟ್ಫೋನ್ ವಿಶೇಷ
ಒಪ್ಪೋ A54 ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಡಿಸ್ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 (MT6765V) SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10. ಆಧಾರಿತ ಕಲರ್ ಒಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ F19 ಸ್ಮಾರ್ಟ್ಫೋನ್ ವಿಶೇಷ
ಒಪ್ಪೋ F19 ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ಮೇಲೆ ರನ್ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಒಳಗೊಂಡಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 5,000mAh ಬ್ಯಾಟರಿಯನ್ನು 33W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಪ್ಯಾಕ್ ಮಾಡುತ್ತದೆ.

ಬೆಲೆ
ಭಾರತದಲ್ಲಿ ಒಪ್ಪೋ A54 ಬೆಲೆಯಲ್ಲಿ ಸಾವಿರ ರೂ ಗಳಷ್ಟು ಹೆಚ್ಚಳವಾಗಿದ್ದು, ಇದೀಗ 14,990ರೂ ಗಳಿಗೆ ಲಭ್ಯವಾಗಲಿದೆ. ಇನ್ನು ಇದರ 4GB + 128GB ಸ್ಟೋರೇಜ್ ಬೆಲೆ ಕೂಡ 14,490ರೂ, ಆಗಿದೆ. ಇನ್ನು ಒಪ್ಪೋ F19 ಸ್ಮಾರ್ಟ್ಫೋನ್ 18,990ರೂ ನಿಂದ 19,990ರೂ ಬೆಲೆಗೆ ಏರಿಕೆ ಆಗಿದೆ. ಈ ಸ್ಮಾರ್ಟ್ಫೋನ್ಗಳು ಈಗಾಗಲೇ ಫ್ಲಿಪ್ಕಾರ್ಟ್, ಅಮೆಜಾನ್ ಪ್ಲಾಟ್ಫಾರ್ಮ್ ಸೈಟ್ಗಳಲ್ಲಿ ಮಾರಾಟದಲ್ಲಿವೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm