ಬ್ರೇಕಿಂಗ್ ನ್ಯೂಸ್
24-05-22 06:28 pm Sources: Oneindia ಉದ್ಯೋಗ
ಬೆಂಗಳೂರು, ಮೇ 24: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಜೂನ್ 6 ಕೊನೆಯ ದಿನವಾಗಿದೆ.
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗ್ರಾಮ ಪಂಚಾಯಿತಿ ನೇಮಕಾತಿ ಸೇವಾ ನಿಯಮಗಳ ಅನ್ವಯ ನೇರವಾಗಿ ನೇಮಕಾತಿ ಮಾಡಲಾಗುತ್ತಿದೆ.
ಕರವಸೂಲಿಗಾರರು 4, ಡಾಟಾ ಎಂಟ್ರಿ ಆಪರೇಟರ್ 4, ಅಟೆಂಡೆಂಟ್ (ಜವಾನ) 8, ಕ್ಲೀನರ್ (ಸ್ವಚ್ಛತಾಗಾರ) 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವ ಗ್ರಾಮ ಪಂಚಾಯಿತಿಯಲ್ಲಿ ಯಾವ ಹುದ್ದೆಗಳು ಖಾಲಿ ಇವೆ? ಎಂಬ ವಿವರಗಳನ್ನು ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಎಲ್ಲಾ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ. ಸಂಬಂಧಪಟ್ಟ ಹುದ್ದೆಗಳಿಗೆ ನಿಗದಿತ ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗಕ್ಕೆ 300 ರೂ., ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 200 ರೂ., ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು.
ಷರತ್ತುಗಳು; ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವವರು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅರ್ಹರು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅಧಿಸೂಚನೆಯಲ್ಲಿನ ಹುದ್ದೆವಾರು ವಿವರ, ವಿದ್ಯಾರ್ಹತೆ, ವಯಸ್ಸು, ಅನುಭವದ ಪ್ರಮಾಣ ಪತ್ರ, ಮೀಸಲಾತಿ ಮುಂತಾದ ಮಾಹಿತಿಯನ್ನು ನೋಡಿಕೊಂಡು ಅರ್ಜಿ ಸಲ್ಲಿಸಬೇಕು. ಆಯ್ಕೆ ಸಮಿತಿಯು ಖಾಲಿ ಇರುವ ಹುದ್ದೆಗಳ ವರ್ಗಗಳಿಗೆ ಸಂಬಂಧಿಸಿದಂತೆ ಅರ್ಹತಾ ಪರೀಕ್ಷೆಯಲ್ಲಿಗಳಿಸಿದ ಗರಿಷ್ಠ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ಸಮಾನವಾಗಿ ಆಯ್ಕೆಪಟ್ಟಿಯನ್ನು ತಯಾರು ಮಾಡಲಿದೆ.
ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಆಯ್ಕೆಪಟ್ಟಿಯಲ್ಲಿ ನೇಮಕ ಮಾಡುವ ನಿಬಂಧನೆಗೊಳಪಟ್ಟಿರುತ್ತದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳನ್ನು ಪಡೆಯಬೇಕಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 6/6/2022 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್ ಸೈಟ್ ವಿಳಾಸ http://bangalorerural.nic.inಮೇ 27ರಂದು
ಕ್ಯಾಂಪಸ್ ಸಂದರ್ಶನ; ರಾಮನಗರದ ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿಯನ್ನು ನೀಡಲು ಕ್ಯಾಂಪಸ್ ಸಂದರ್ಶನವನ್ನು ಮೇ 27ರಂದು ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪನ್ ಸಂದರ್ಶನ ನಡೆಯಲಿದೆ ಎಂದು ಕಲಬುರಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ ತಿಳಿಸಿದ್ದಾರೆ. ಐಟಿಐ ಪಾಸಾದ ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ದೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರಾಮನಗರ ಹೆಚ್ಆರ್ಡಿ ಮೊಬೈಲ್ ಸಂಖ್ಯೆ 9686189321ಗೆ ಕರೆ ಮಾಡಬಹುದಾಗಿದೆ. ಸಮುದಾಯ ಸಂಪನ್ಮೂಲ ಹುದ್ದೆ; ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ವಾಡಿ ಪುರಸಭೆಯಲ್ಲಿ ಗೌರವಧನದ ಆಧಾರದ ಮೇಲೆ ಸಮುದಾಯ ಸಂಪನ್ಮೂಲ ವ್ಯಕ್ತಿ ಎರಡು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಾಡಿ ಪ್ರದೇಶ ಮಟ್ಟದ ಒಕ್ಕೂಟ/ ಸ್ವ-ಸಹಾಯ ಸಂಘದ ಸದಸ್ಯರಾಗಿರುವ 18 ರಿಂದ 45 ವರ್ಷ ವಯೋಮಾನದ ದ್ವಿತೀಯ ಪಿಯುಸಿ ತೇರ್ಗಡೆಯಾದ ಅರ್ಹ ಮಹಿಳಾ ಅಭ್ಯರ್ಥಿಗಳು ಜೂನ್ 3ರ ಸಾಯಂಕಾಲ 4.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
Bangalore Rural District Panchayat, work is vacant.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm