ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm