ಬ್ರೇಕಿಂಗ್ ನ್ಯೂಸ್
01-09-24 08:53 pm Bangalore Correspondent ಉದ್ಯೋಗ
ಬೆಂಗಳೂರು, ಸೆ.1: ಸೈನ್ಸ್‌ನಲ್ಲಿ 12ನೇ ತರಗತಿ ಪಾಸಾಗಿದ್ದರೆ, ಅರೆಸೇನಾ ಪಡೆಯ ಉದ್ಯೋಗಕ್ಕೆ ಸೇರಬಹುದು. ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್) ವತಿಯಿಂದ 1,100ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಫೈರ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ (CISF Constable Recruitment 2024 notification) ಪ್ರಕಟಿಸಿದೆ. ಇದರಲ್ಲಿ ಕರ್ನಾಟಕದಿಂದ 33 ಖಾಲಿ ಹುದ್ದೆಗಳೂ ಇವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.30 ಕೊನೆ ದಿನವಾಗಿರುತ್ತದೆ.
ಒಟ್ಟು 1130 ಹುದ್ದೆಗಳಿದ್ದು, 466 ಹುದ್ದೆ ಸಾಮಾನ್ಯ ವರ್ಗಕ್ಕೆ, 114 ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS), 153 ಪರಿಶಿಷ್ಟ ಜಾತಿಗಳಿಗೆ (SC), 161 ಪರಿಶಿಷ್ಟ ಪಂಗಡಗಳಿಗೆ (ST) ಮತ್ತು ಇತರ ಹಿಂದುಳಿದ ವರ್ಗಗಳಿಗೆ (OBC) 236 ಹುದ್ದೆಗಳನ್ನು ಕಾಯ್ದಿರಿಸಲಾಗಿದೆ. ಆದರೆ ಇದು ಪುರುಷ ಅಭ್ಯರ್ಥಿಗಳಿಗೆ ಸೀಮಿತ ಆಗಿರುತ್ತದೆ. ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ ಆಗಸ್ಟ್ 30 ರಂದು ಶುರುವಾಗಿದೆ. ಪರೀಕ್ಷೆಯ ದಿನಾಂಕ ಮತ್ತು ಪ್ರವೇಶ ಕಾರ್ಡ್ ಬಿಡುಗಡೆ ದಿನಾಂಕವನ್ನು ಸೂಕ್ತ ಸಮಯದಲ್ಲಿ ಪ್ರಕಟಿಸುವುದಾಗಿ ಸಿಐಎಸ್‌ಎಫ್ ತಿಳಿಸಿದೆ.
ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ಉತ್ತೀರ್ಣರಾಗಿರಬೇಕು. ವಯಸ್ಸು 18 ವರ್ಷದಿಂದ 23 ವರ್ಷದೊಳಗಿರಬೇಕು. ಮೀಸಲಾತಿ ಹೊಂದಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.12ನೇ ತರಗತಿ ವಿಜ್ಞಾನ ವಿಷಯದಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾಬ್ಯಾಸ ಹೊಂದಿರಬೇಕು. ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪ್ರಮಾಣ ಪತ್ರ ಹೊಂದಿರಬೇಕು. ಶಾರೀರಿಕ ಮಾನದಂಡಗಳ ಪೈಕಿ ಅಭ್ಯರ್ಥಿ 170 ಸೆಂಟಿ ಮೀಟರ್ ಎತ್ತರ ಹೊಂದಿದ್ದು, ಎದೆಯ ಸುತ್ತಳತೆ 80 ರಿಂದ 85 ಸೆಂಟಿಮೀಟರ್ ಇರಬೇಕು. ಕನಿಷ್ಠ ವಿಸ್ತರಣೆ 5 ಸೆಂಟಿ ಮೀಟರ್ ಎಂದು ಉಲ್ಲೇಖಿಸಲಾಗಿದೆ. ಇದು ಲೆವೆಲ್ 3 ಹುದ್ದೆಯಾಗಿದ್ದು ತಿಂಗಳಿಗೆ 21,700 ರೂಪಾಯಿಯಿಂದ 69,100 ರೂಪಾಯಿ ತನಕ ವೇತನ ಶ್ರೇಣಿ ಹೊಂದಿದೆ.
ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಹುದ್ದೆ ನೇಮಕ ಪ್ರಕ್ರಿಯೆಗೆ ಎರಡು ರೀತಿಯ ಶಾರೀರಿಕ ಪರೀಕ್ಷೆಗಳಿರುವುದನ್ನು ಉಲ್ಲೇಖಿಸಲಾಗಿದೆ. ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ) ಮತ್ತು ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ) ನಡೆಯಲಿದೆ. ಅದಾಗಿ ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂಪಾಯಿ ಪಾವತಿಸಬೇಕು. ಆದರೆ, ಎಸ್‌ಸಿ, ಎಸ್‌ಟಿ ಮತ್ತು ಎಕ್ಸ್ ಮಿಲಿಟರಿಯವರಿಗೆ ಶುಲ್ಕ ವಿನಾಯಿತಿ ಇದೆ. ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 10 ರಿಂದ 12 ತನಕ ಅರ್ಜಿಯಲ್ಲಿ ತಿದ್ದುಪಡಿ ಇದ್ದರೆ ಮಾಡಬಹುದು. ತಿದ್ದುಪಡಿಗೆ 200 ರೂಪಾಯಿ ಶುಲ್ಕ ಪಾವತಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
If you have passed class 12 in science, you can join the paramilitary force. The Central Industrial Security Force (CISF) has released the CISF Constable Recruitment 2024 notification for over 1,100 constable fireman posts. There are 33 vacancies from Karnataka. The last date to apply online is September 30.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm