ಬ್ರೇಕಿಂಗ್ ನ್ಯೂಸ್
05-02-25 06:52 pm HK News Desk ಉದ್ಯೋಗ
ಹುಬ್ಬಳ್ಳಿ , ಫೆ 05: ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಹುಡುಕುತ್ತಿದ್ದರೆ ನಿಮಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ಹುಬ್ಬಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು. ಇದರಲ್ಲಿ ನೂರಾರು ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ. ಈ ಮೇಳದಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಉದ್ಯೋಗ ಮೇಳ ಯಾವಾಗ ನಡೆಯಲಿದೆ. ಎಲ್ಲಿ ನಡೆಯಲಿದೆ ಹಾಗೂ ಯಾರೆಲ್ಲ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಹುಬ್ಬಳ್ಳಿಯಲ್ಲಿ ಫೆಬ್ರವರಿ 8ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇಲ್ಲಿನ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್.ಪಿ. ಫೌಂಡೇಶನ್ ನವಲಗುಂದದ ಸಹಯೋಗದಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಇನ್ನು ಈ ಉದ್ಯೋಗ ಮೇಳವನ್ನು ಫೆಬ್ರವರಿ 8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
50 ಕಂಪನಿಗಳು ಭಾಗಿ:
ಹುಬ್ಬಳ್ಳಿಯಲ್ಲಿ ನಡೆಯಲಿರುವ ಈ ಬೃಹತ್ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಹಲವು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು. ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಮೇಳದಲ್ಲಿ 50ಕ್ಕೂ ಅಧಿಕ ಖಾಸಗಿ ವಲಯದ ಉದ್ಯೋಗದಾತರು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ನೇರ ಸಂದರ್ಶನ ಸಹ ನಡೆಯಲಿದೆ.
ಯಾರೆಲ್ಲ ಭಾಗವಹಿಸಬಹುದು:
ಇನ್ನು ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವವರು/ ಪಾಸಾಗಿರುವವರು ಭಾಗವಹಿಸಬಹುದಾಗಿದೆ. ಇನ್ನು ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕೆ 18 ರಿಂದ 35 ವಯಸ್ಸಿನ ಒಳಗಿರಬೇಕು. ಈ ವಯೋಮಾನದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಮೇಳದಲ್ಲಿ ಭಾಗವಹಿಸುವುದಕ್ಕೆ ಯಾವುದಾರೂ ಗೊಂದಲಗಳಿದ್ದರೆ. ಇಲ್ಲವೇ ಹೆಚ್ಚಿನ ಮಾಹಿತಿ ಬೇಕಾದರೆ 9535360259, 8453208555, 9806905751 ಹಾಗೂ 9164192155 ಮೊಬೈಲ್ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Job News kannada, Hubballi Feb 8th job fair organised, apply now or contact the numbers listed.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 08:16 pm
HK News Desk
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm