ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm