ಬ್ರೇಕಿಂಗ್ ನ್ಯೂಸ್
30-07-25 03:26 pm Bangalore Correspondent ಉದ್ಯೋಗ
ಬೆಂಗಳೂರು, ಜುಲೈ 30 : ಕೇಂದ್ರ ಗೃಹ ಸಚಿವಾಲಯದ ಅಧೀನದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಕ್ರೀಡಾ ಕೋಟಾದಡಿ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) (ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 241 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಈಜು, ಡೈವಿಂಗ್, ವಾಟರ್ ಪೋಲೋ, ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಕ್ರಾಸ್ ಕಂಟ್ರಿ, ಈಕ್ವೆಸ್ಟ್ರಿಯನ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಐಸ್ ಸ್ಕೀಯಿಂಗ್, ಜೂಡೋ, ಕರಾಟೆ, ವಾಲಿಬಾಲ್, ವೇಟ್ ಲಿಫ್ಟಿಂಗ್, ವಾಟರ್ ಸ್ಪೋರ್ಟ್ಸ್, ಕುಸ್ತಿ, ಶೂಟಿಂಗ್, ಟೇಕ್ವಾಂಡೋ, ವುಶು, ಫೆನ್ಸಿಂಗ್, ಕಯಾಕಿಂಗ್, ಕ್ಯಾನೋಯಿಂಗ್ (ಬೋಟ್ ರೇಸಿಂಗ್), ರೋಯಿಂಗ್, ಟೇಬಲ್ ಟೆನಿಸ್ ಹೀಗೆ ಯಾವುದಾದರೂ ಒಂದು ಕ್ರೀಡೆಯಲ್ಲಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 147 ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆ ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಯಾವುದೇ ಲಿಖಿತ ಪರೀಕ್ಷೆ ನಡೆಸದೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
The Border Security Force (BSF), under the Ministry of Home Affairs, Government of India, has invited online applications from eligible male and female candidates for recruitment to 241 Constable (General Duty) posts under the Sports Quota. These are non-gazetted, non-ministerial positions.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 08:16 pm
HK News Desk
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm