ಬ್ರೇಕಿಂಗ್ ನ್ಯೂಸ್
28-08-25 07:38 pm Mangalore Correspondent ಉದ್ಯೋಗ
ಮಂಗಳೂರು, ಆ.28 : ವಿಶ್ವದ ಮೊದಲ ಎಐ ಕಾರ್ಡ್ ಎಂಬ ಹೆಗ್ಗಳಿಕೆಯೊಂದಿಗೆ ಕೃತಕ ಬುದ್ಧಿಮತ್ತೆ ಶಿಕ್ಷಣದಲ್ಲಿ ಹೊಸ ಇತಿಹಾಸ ಸೃಷ್ಟಿಸಿರುವ ಯತಿಕಾರ್ಪ್ ಸಂಸ್ಥೆಯು 125 ಬಿಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಆಯ್ಕೆಯಾದವರಿಗೆ ವಾರ್ಷಿಕ ರೂ. 3 ಲಕ್ಷದಿಂದ ರೂ. 5 ಲಕ್ಷದ ವರೆಗೆ ಆಕರ್ಷಕ ವೇತನ ಪ್ಯಾಕೇಜ್ ಘೋಷಿಸಿದೆ.
ಸಂಸ್ಥೆಯು ತನ್ನ ಎಐ ಕಾರ್ಡ್ ಯೋಜನೆಯ ವಿಸ್ತರಣಾ ಭಾಗವಾಗಿ, ಈ ನೇಮಕ ಪ್ರಕ್ರಿಯೆ ಆರಂಭಿಸಿದೆ. ಈ ಹುದ್ದೆಗೆ ಎಂಬಿಎ ಅಥವಾ ಇತರೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅನುಭವಿಗಳು ಹಾಗೂ ಶಿಕ್ಷಣ ಈಗ ತಾನೇ ಮುಗಿಸಿದ ಯುವಕ- ಯುವತಿಯರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ತಾಲೂಕು ಮಟ್ಟದಲ್ಲಿ ಡೀಲರ್ಶಿಪ್ ಹಾಗೂ ಏಜೆನ್ಸಿ ನೀಡಲಾಗಿದ್ದು, ತಾಲೂಕು ಮಟ್ಟದಲ್ಲಿ ಎಕ್ಸಿಕ್ಯೂಟಿವ್ ನೇಮಕವಾಗಿರುತ್ತದೆ. ಇದರ ಮೇಲ್ವಿಚಾರಣೆ ಹಾಗೂ ಮಾರುಕಟ್ಟೆ ಸಮನ್ವಯ ಮಾಡುವ ಉದ್ದೇಶದಿಂದ ಈ ನೇಮಕ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿರುವ ಕಾರ್ಪೊರೇಟ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಅಲ್ಲದೆ, ಅವರಿಗೆ ಸೂಕ್ತ ವೃತ್ತಿಪರ ತರಬೇತಿಯನ್ನೂ ನೀಡಲಾಗುತ್ತದೆ.
ಜವಾಬ್ದಾರಿಗಳು ಮತ್ತು ಕೌಶಲ್ಯಗಳು
ಈಗಾಗಲೇ ನೇಮಕವಾಗಿರುವ ತಾಲೂಕು ಮಟ್ಟದ ಪ್ರತಿನಿಧಿಗಳ ಮಾರಾಟ ತಂಡವನ್ನು ನಿರ್ವಹಿಸುವುದು, ರಿಪೋರ್ಟಿಂಗ್ ಮತ್ತು ತಂಡದ ಗುರಿಗಳನ್ನು ತಲುಪಲು ನಾಯಕತ್ವ ವಹಿಸುವುದು ಮುಂತಾದ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ಹೆಚ್ಚಿನ ಮಾಹಿತಿಯು ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯ ಇದೆ.
ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ "Company' ವಿಭಾಗದಲ್ಲಿರುವ "Career' ಪುಟಕ್ಕೆ ಹೋದರೆ, `ಬಿಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್' ಹುದ್ದೆಯ ವಿವರಗಳು ಲಭ್ಯವಿವೆ. ಅಲ್ಲಿ "Apply Now' ಬಟನ್ ಕ್ಲಿಕ್ ಮಾಡಿ, ತಮ್ಮ ಹೆಸರು, ಇಮೇಲ್, ದೂರವಾಣಿ ಸಂಖ್ಯೆ, ಪ್ರಸ್ತುತ ಸ್ಥಳ ಹಾಗೂ ರೆಸ್ಯೂಮ್ ಅನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Mangalore YatiCorp, renowned for launching the world’s first AI-powered card, has announced the recruitment process for 125 Business Development Executive (BDE) positions. The company is offering an attractive annual salary package ranging from ₹3 lakh to ₹5 lakh for selected candidates.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm