ಬ್ರೇಕಿಂಗ್ ನ್ಯೂಸ್
07-09-21 09:10 pm Source ; One India Kannada ಉದ್ಯೋಗ
ಹಾಸನ, ಸೆಪ್ಟೆಂಬರ್ : ಹಾಸನ ಜಿಲ್ಲೆಯಲ್ಲಿ ಆಡಳಿತ ಸಹಾಯಕ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 19ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ ತಾಲೂಕು ಪಂಚಾಯಿತಿಗಳಲ್ಲಿ ಖಾಲಿ ಇರುವ ಆಡಳಿತ ಸಹಾಯಕ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಎನ್.ಐ.ಸಿ ಯ ಜಿಲ್ಲಾ ವೆಬ್ ಸೈಟ್ https://hassan.nic.in ಅರ್ಜಿ ಸಲ್ಲಿಸಬೇಕು. ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 8.
ಅರ್ಜಿಗಳನ್ನು ಸಲ್ಲಿಸುವವರು ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದಿದ್ದು ಜೊತೆಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಇಂಗ್ಲೀಷ್ ಟೈಪಿಂಗ್ ಕಲಿತಿರಬೇಕು. ಕನಿಷ್ಠ 21 ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ : ಲಸಿಕೆ ಆಡಳಿತದಲ್ಲಿ ನೆರೆಯ ಕುಟುಂಬಗಳನ್ನು ಬೆಂಬಲಿಸುವ ಮೂಲಕ ಸಮುದಾಯಕ್ಕೆ ವ್ಯಾಕ್ಸಿನ್ ರಾಯಭಾರಿಯಾಗಿ ಕೆಲಸ ನಿರ್ವಹಿಸುವುದಕ್ಕಾಗಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕುಷ್ಠರೋಗಗಳ ನಿರ್ಮೂಲನೆ ಅಧಿಕಾರಿಗಳ ಕಚೇರಿ ವತಿಯಿಂದ ಇಂಟರ್ನ್‌ಶಿಪ್ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡುವ ಅವಧಿಯನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಹಾಕುವವರು ಸೇವಾ ಮನೋಭಾವನೆ ಹೊಂದಿರಬೇಕು. 12 ನೇ ತರಗತಿ ಉತ್ತೀರ್ಣರಾಗಿರುವ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷಣ ಹೊಂದಿರಬೇಕು.
ಕನ್ನಡ ಭಾಷೆ ಬಲ್ಲವರು ಹಾಗೂ ಜಿಲ್ಲೆಯ ನಿವಾಸಿಯಾಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಇಂಟರ್ನ್ ಶಿಪ್ ಅವಧಿ 6 ವಾರಗಳಾಗಿವೆ. ದಿನಕ್ಕೆ 2 ರಿಂದ 3ಗಂಟೆಗಳವರೆಗೆ ನಡೆಯಲಿದೆ. ತರಬೇತಿ ಪಡೆದವರು ಸರ್ಕಾರಿ ಅಧಿಕಾರಿಗಳ ನಾಯಕತ್ವದಲ್ಲಿ ಕೆಲಸ ಮಾಡಲು ವೃತ್ತಿಪರ ಮಾನ್ಯತೆ, ಅಭಿವೃದ್ಧಿ ಕ್ಷೇತ್ರದ ತಜ್ಞರಿಂದ ಕಲಿಯುವ ಅವಕಾಶ ಹಾಗೂ ಜಿಲ್ಲಾಡಳಿತದಿಂದ ಪ್ರಮಾಣಪತ್ರ ಸಹ ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯವನ್ನು ಸಂಪಕಿಸಬಹುದಾಗಿದೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ದೇವರಸನಹಳ್ಳಿ, ಕುರಿಹುಂಡಿ ಹಾಗೂ ಹಾಡ್ಯ ಗ್ರಾಮಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸಲು ಮಾಸಿಕ 6000 ರೂ.ಗಳ ಗೌರವಧನದ ಆಧಾರದ ಮೇರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಣೆ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ಉತ್ತೀರ್ಣ, ಅನುತೀರ್ಣರಾಗಿದ್ದು (ಅಂಕಪಟ್ಟಿ ಕಡ್ಡಾಯ).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷ. ಪುರುಷ, ಮಹಿಳಾ ಅಂಗವಿಕಲರಿಗೆ ಮಾತ್ರ ಅವಕಾಶವಿರುತ್ತದೆ. ಹುದ್ದೆಯು ಗೌರವಧನ ಹುದ್ದೆಯಾಗಿದ್ದು, ಸರ್ಕಾರಿ ಹುದ್ದೆಯಾಗಿರುವುದಿಲ್ಲ.
ಅರ್ಹ ಸಮರ್ಥ ವಿಕಲಚೇತನ ವ್ಯಕ್ತಿಗಳು ಅರ್ಜಿ ನಮೂನೆಗಳನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಯಲ್ಲಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು, ಭರ್ತಿ ಮಾಡಿ ಸೆಪ್ಟೆಂಬರ್ 15ರೊಳಗಾಗಿ ಸಲ್ಲಿಸಬಹುದು.
Apply for Administrative Assistant post at Hassan.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm