ಬ್ರೇಕಿಂಗ್ ನ್ಯೂಸ್
09-09-21 06:17 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 09 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಇಸ್ಲಾಂಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಆಂಗ್ಲ ಮಾಧ್ಯಮದಲ್ಲಿ 6 ರಿಂದ 9ನೇ ತರಗತಿ ಬೋಧಿಸಲು ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವವರು ಸ್ಥಳೀಯ ಅರ್ಹ ಅತಿಥಿ/ ನಿವೃತ್ತಿ ಶಿಕ್ಷಕರಾಗಿರಬೇಕು.
ಕನ್ನಡ ಭಾಷಾ ಶಿಕ್ಷಕ 1 ಹುದ್ದೆಗೆ ಐಚ್ಛಿಕ ಕನ್ನಡ ವಿಷಯದಲ್ಲಿ ಬಿಎ/ ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬೇಕು. ವಿಜ್ಞಾನ ಶಿಕ್ಷಕರ 1 ಹುದ್ದೆಗೆ ಬಿಎಸ್ಸಿ/ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು.
ಗಣಿತ ಶಿಕ್ಷಕ 1 ಹುದ್ದೆಗೆ ಬಿಎಸ್ಸಿ/ ಬಿಎಡ್ ವಿದ್ಯಾರ್ಹತೆ ಹಾಗೂ ಉರ್ದು ಶಿಕ್ಷಕ 1 ಹುದ್ದೆಗೆ ಐಚ್ಛಿಕ ಉರ್ದು ವಿಷಯದಲ್ಲಿ ಬಿಎ/ ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳನ್ನು ಬರೆದು ಅಗತ್ಯ ದಾಖಲೆಗಳ ಜೊತೆ 2021ರ ಸೆಪ್ಟೆಂಬರ್ 30 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ಇವರನ್ನು ಸಂಪರ್ಕಿಸಬಹುದುದ. ದೂರವಾಣಿ ಸಂಖ್ಯೆ 7019605870, 8746993589.
ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಟಿ.ಬಿ. ಬಸ್ಸ್ಟಾಪ್ ಹತ್ತಿರ, ಸುಭಾಶ್ ನಗರ, ನೆಲಮಂಗಲ ತಾಲ್ಲೂಕು. ದೂರವಾಣಿ ಸಂಖ್ಯೆ 080-27725445 ಇಲ್ಲಿಗೆ ಸಹ ಸಂಪರ್ಕಿಸಬಹುದು.
ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೂ ಭೇಟಿ ನೀಡಬಹುದಾಗಿದೆ.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆ; ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಹಾಗೂ ಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಆಯ್ಕೆಯಾದ ಕಾರ್ಯಕರ್ತರಿಗೆ ಪ್ರತಿ ತಿಂಗಳು 6,000 ರೂ. ಗಳ ಗೌರವಧನ ನೀಡಲಾಗುತ್ತದೆ. ಆಸಕ್ತರು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಎಸ್. ಎಸ್. ಎಲ್. ಸಿ. ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನವಾಗಿದ್ದು, ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. 'ಬಿ' ಬ್ಲಾಕ್ ದಾವಣಗೆರೆ. ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08192-263939.
ವಿವಿಧ ಹುದ್ದೆಗಳ ಭರ್ತಿ; ಬಳ್ಳಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಕರೆದಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ್ 18ರ ತನಕ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆರ್ಸಿಎಚ್ ಘಟಕದ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಕೆ ಮಾಡಬೇಕು.
ಅಭ್ಯರ್ಥಿಗಳು ಅರ್ಜಿಯ ಜೊತೆ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಪರಿಶೀಲನೆಗಾಗಿ ಎಲ್ಲ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಸೆಪ್ಟೆಂಬರ್ 22ರಂದು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 24ರೊಳಗಾಗಿ ಸಲ್ಲಿಸಬೇಕು.
ಅರ್ಹ ಅಭ್ಯರ್ಥಿಗಳ ಆಯ್ಕೆಯನ್ನು ಮೀಸಲಾತಿ ಪಟ್ಟಿಯಂತೆ ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇರೆಗೆ 371ಜೆ ಮತ್ತು ನಾನ್ 371ಜೆ ಹಾಗೂ ಒಳಮೀಸಲಾತಿ ಪರಿಗಣಿಸಿ ನೇಮಕ ಮಾಡಲಾಗುತ್ತದೆ. ಹುದ್ದೆಗಳ ಸಂಖ್ಯೆ ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಆಯ್ಕೆ ಸಮಿತಿಯದ್ದಾಗಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ. ಅರ್ಜಿ ಶುಲ್ಕ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08392-273739 ಸಂಪರ್ಕಿಸಬಹುದು.
Apply for various posts at Bengaluru, Davanagere and Ballari.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm