ಬ್ರೇಕಿಂಗ್ ನ್ಯೂಸ್
15-09-21 05:53 pm Source ; One India Kannada ಉದ್ಯೋಗ
ಶಿವಮೊಗ್ಗ, ಸೆಪ್ಟೆಂಬರ್ 14: ಶಿವಮೊಗ್ಗ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರು ಮತ್ತು ಜವಾನರ ತಲಾ 01 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ಗೌರವಧನ ನೀಡಲಾಗುತ್ತದೆ.
ಲೆಕ್ಕಿಗರ ಹುದ್ದೆಗೆ ಗೌರವಧನ ರೂ.13,310/- ಆಗಿದ್ದು ಅಭ್ಯರ್ಥಿಯು .ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು (ಅರ್ಜಿ ಜೊತೆಗೆ ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು), ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (ಎಂ.ಎಸ್ ಆಫೀಸ್, ಇಂಟರ್ನೆಟ್ ಆಪರೇಷನ್ ಅರಿವು ಕಡ್ಡಾಯ). ಟ್ಯಾಲಿ ತಂತ್ರಾಂಶವನ್ನು ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಇರಬೇಕು. ಕಛೇರಿ ಪತ್ರ ವ್ಯವಹಾರಗಳ ಲೆಕ್ಕ ಪತ್ರಗಳ ವ್ಯವಹಾರಗಳನ್ನು ಗಣಕಿಕೃತದಲ್ಲಿ ನಮೂದಿಸಿ ಕೇಂದ್ರ ಕಛೇರಿಗಳಿಗೆ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.
ಕಚೇರಿ ಜವಾನರು ಹುದ್ದೆಗೆ ಗೌರವಧನ ರೂ.10,648/-ಆಗಿದ್ದು, ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಕಛೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು. ಓದಲು, ಬರೆಯಲು ಕಡ್ಡಾಯವಾಗಿ ಬರಬೇಕು. ಕಛೇರಿ ವ್ಯವಹಾರಕ್ಕೆ ಬ್ಯಾಂಕು, ಇತರೆ ಇಲಾಖೆಗಳಿಗೆ ಹೋಗಬೇಕಾಗಿರುತ್ತದೆ. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.
ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯಲ್ಲಿ, ಸ್ವವಿವರಗಳನ್ನು ನಮೂದಿಸಿದ ಬಯೋಡಾಟ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸೊಸೈಟಿ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಇವರ ಹೆಸರಿಗೆ ಬರೆದು, ಈ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಛೇರಿ, 2ನೇ ಮಹಡಿ ವಾಣಿಜ್ಯ ಸಂಕೀರ್ಣ, ಸಿ.ಐ.ಟಿ.ಬಿ (ಸೂಡ) ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇವರಿಗೆ ಸೆಪ್ಟೆಂಬರ್ 27, 2021ರೊಳಗೆ ತಲುಪುವಂತೆ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ:
ಕರ್ನಾಟಕವನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ರಾಜ್ಯ ಸರ್ಕಾರವು ರಾಜ್ಯ ಮಟ್ಟದಲ್ಲಿ ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯನ್ನು ಸ್ಥಾಪಿಸಲು ರಾಜ್ಯಸರ್ಕಾರವು ಸರ್ಕಾರದ ಆದೇಶ ಸಂಖ್ಯೆ: ಕಾಇ 53 ಸಿಎಲ್‌ಸಿ 2003 ಬೆಂಗಳೂರು, ದಿನಾಂಕ: 26/06/2003 ರಲ್ಲಿ ಅನುಮತಿಯನ್ನು ನೀಡಿರುವುದು. ಅದರನ್ವಯ ಸಹಕಾರ ಸಂಘಗಳ ನೋಂದಣೆ ಇಲಾಖೆಯಲ್ಲಿ ನೋಂದನೆ ಸಂಖ್ಯೆ: 362/03-04, ದಿನಾಂಕ: 23/07/2003 ರಲ್ಲಿ ನೋಂದಣೆ ಯಾಗಿರುವುದು. ರಾಜ್ಯ ಸರ್ಕಾರದ ರಾಜ್ಯ ಬಾಲಕಾರ್ಮಿಕ ಯೋಜನೆಯನ್ನು, ಕೇಂದ್ರ ಸರ್ಕಾರದ ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯನ್ನು ಹಾಗೂ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ ಕಾಯ್ದೆ,) 1986 ತಿದ್ದುಪಡಿ ಕಾಯ್ದೆ, 2016ರನ್ನು ಅನುಷ್ಠಾನಗೊಳಿಸುವುದು ಹಾಗೂ ಬಾಲ್ಯಾವಸ್ಥಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ನಿಷೇಧ ಕುರಿತು ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದು ಸೊಸೈಟಿಯ ಪ್ರಮುಖ ಉದ್ದೇಶವಾಗಿದೆ. ಸದರಿ ಸೊಸೈಟಿಗೆ ಮಾನ್ಯ ಸರ್ಕಾರದ ಕಾರ್ಯದರ್ಶಿಗಳು ಕಾರ್ಮಿಕ ಇಲಾಖೆ ಇವರು ಅಧ್ಯಕ್ಷರಾಗಿರುತ್ತಾರೆ.
ರಾಜ್ಯದ 30 ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಮೂಲಕ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಮೂಲಕ ಕರ್ನಾಟಕವನ್ನು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮವಹಿಸಲಾಗುತ್ತದೆ. 2001 ರಲ್ಲಿ ರಾಜ್ಯ ಸರ್ಕಾರವು ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ, "ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಕ್ರಿಯಾ ಯೋಜನೆ" ಯನ್ನು ಜಾರಿಗೆ ತಂದ ಪ್ರಥಮ ರಾಜ್ಯವಾಗಿದೆ.
Applications invited from qualified for various job posting in Karnataka State Child Labour Eradication Project Society, Shivamogga.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm