ಬ್ರೇಕಿಂಗ್ ನ್ಯೂಸ್
19-09-21 10:09 pm Source ; One India Kannada ಉದ್ಯೋಗ
ತುಮಕೂರು, ಸೆಪ್ಟೆಂಬರ್ 19 : ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಎಡೆಯೂರು ನಿಯಂತ್ರಣಕ್ಕೆ ಒಳಪಟ್ಟಿರುವ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
26/3/2021ರಂದು ನಡೆದ ನೇರ ಸಂದರ್ಶನದಲ್ಲಿ ಅರ್ಹ ಅಭ್ಯರ್ಥಗಳು ಲಭ್ಯವಾಗದ ಕಾರಣ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಅರ್ಹ ಅಭ್ಯರ್ಥಿಗಳಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ ಎಡೆಯೂರು ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ವೀರಶೈವಾಗಮ ಪಾಠಶಾಲೆ ಎರಡೆಯೂರು ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಯ ವಿವರ; ವೇದ ಶಿಕ್ಷಕರು, ಅರ್ಜಿ ಸಲ್ಲಿಸುವವರು ವೀರಶೈವ ವೇದ ವಿದ್ವತ್ ಉತ್ತಮ (ಎಂ. ಎ೦) ಮತ್ತು ವೀರಶೈವಾಗಮ ಪ್ರವೀಣ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವ ಧನ 8 ಸಾವಿರ ರೂ.ಗಳು.
ಸಂಸ್ಕೃತ ಸಾಹಿತ್ಯ ಶಿಕ್ಷಕರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವ್ಯಾಕರಣ ಶಾಸ್ತ್ರ ವಿದ್ವತ್ ಉತ್ತಮ (ಎಂ. ಎ) ಅಥವ ಸಂಸ್ಕೃತ ಎಂ. ಎ. ಅಥವ ಅಲಂಕಾರ ಶಾಸ್ತ್ರ ವಿದ್ವತ್ ಉತ್ತಮ (ಎಂ. ಎ.) ಮತ್ತು ವೀರಶೈವಾಗಮ ಪ್ರವೀಣ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವ ಧನ 8000 ಸಾವಿರ ರೂ.ಗಳು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಗರಿಷ್ಠ ವಯಸ್ಸು 40 ವರ್ಷ ದಾಟಿರಬಾರದು. ಮೇಲೆ ತಿಳಿಸಿರುವ ವಿಷಯದಲ್ಲಿ ಯಾವುದಾದರೂ ಬೇರೆ ಸಂಸ್ಥೆಯಲ್ಲಿ ಬೋಧನೆ ಮಾಡಿದ ಅನುಭವದ ದಾಖಲೆ ಲಗತ್ತಿಸಬೇಕು. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿದೆ.
ಮೇಲ್ಕಂಡ ಹುದ್ದೆಗಳು ತಾತ್ಕಾಲಿಕವಾಗಿವೆ. ಆಸಕ್ತ ಅಭ್ಯರ್ಥಿಗಳು ತಮ್ಮ ಕೈ ಬರದಹದಲ್ಲಿ ಬರೆದ ಅರ್ಜಿಯನ್ನು ಮೇಲ್ಕಂಡ ವಿದ್ಯಾರ್ಹತೆಗೆ ಸಂಬಂಧಪಟ್ಟ ದಾಖಲೆಗಳ ಜೊತೆ 15 ದಿನಗಳ ಒಳಗೆ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರ, ಎಡೆಯೂರು ಕುಣಿಗಲ್ ತಾಲೂಕು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸದ್ಯಸ್ಯರ ನೇಮಕ; ಧಾರವಾಡ ಜಿಲ್ಲಾ ಪೊಲೀಸ್ ದೂರು ಪ್ರಾದಿಕಾರಕ್ಕೆ ನಾಗರಿಕ ಸೇವಾ ಸಮಾಜದಿಂದ ಒಬ್ಬ ಹಾಗೂ ನಿವೃತ್ತ ನಾಗರೀಕ ಸೇವಾ ಅಧಿಕಾರಿಯನ್ನು ಸದ್ಯಸ್ಯರನ್ನಾಗಿ ನೇಮಕ ಮಾಡಲಾಗುತ್ತದೆ.
ಸದಸ್ಯರ ಅವಧಿಯು ಮೂರು ವರ್ಷಗಳಾಗಿದ್ದು, ಈಗಾಗಲೇ ಇರುವ ಸದಸ್ಯರ ಅವಧಿ ಪೂರ್ಣಗೊಂಡಿರುವುದರಿಂದ ಧಾರವಾಡ ಜಿಲ್ಲಾ ಪೊಲೀಸ್ ದೂರು ಪ್ರಾದಿಕಾರಕ್ಕೆ ಹೊಸದಾಗಿ ನಾಗರಿಕ ಸೇವಾ ಸಮಾಜದಿಂದ ಒಬ್ಬ ಸದಸ್ಯ ಮತ್ತು ಒಬ್ಬ ನಿವೃತ್ತ ನಾಗರೀಕ ಸೇವಾ ಅಧಿಕಾರಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಪ್ಟೆಂಬರ್ 30ರೊಳಗಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಆಸಕ್ತರು ತಮ್ಮ ಪರಿಚಯ ಪತ್ರವನ್ನು ಮತ್ತು ತಮ್ಮ ವಿವರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯದ [email protected] ಇ-ಮೇಲ್ ವಿಳಾಸಕ್ಕೆ ಸಲ್ಲಿಸಬಹುದು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ; ಹಾಸನ ಜಿಲ್ಲೆಯ ಬೇಲೂರು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13 ಸಂಜೆ 5.30 ಆಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಾಲೂರು ಕಾಂಪ್ಲೆಕ್ಸ್ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ವೃತ್ತ, ಬೇಲೂರು, ದೂರವಾಣಿ ಸಂಖ್ಯೆ 08177-222269.
Apply for Guest Lecturers post in schools which come under Yediyuru Siddhalingeshwara temple Yedeyuru village, Kunigal.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm