ಬ್ರೇಕಿಂಗ್ ನ್ಯೂಸ್
20-09-21 05:27 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 20 : ಕರ್ನಾಟಕದ ಹೈಕೋರ್ಟ್ ಮೂರು ಭಾಷಾಂತರಕಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 16 ಅಕ್ಟೋಬರ್ 2021 ಕೊನೆಯ ದಿನವಾಗಿದೆ.
ಒಟ್ಟು ಮೂರು ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅಂಚೆ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ ಆಯ್ಕೆಯಾದ ಅಭ್ಯರ್ಥಿಗಳಿಗೆ 44,900 ರಿಂದ 1,42,400 ರೂ. ವೇತನ ನಿಗದಿ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲಿಶ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು (ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು). ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ನೇಮಕಾತಿ ನಿಯಮಗಳ ಅನ್ವಯ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ ಮತ್ತು ವೈವಾ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ಪತ್ರಿಕೆ 1 ಭಾಷಾ ಪರೀಕ್ಷೆಯದ್ದು ಆಗಿರುತ್ತದೆ (ಕನ್ನಡ, ಇಂಗ್ಲಿಶ್) 100 ಅಂಕಗಳನ್ನು ಪತ್ರಿಕೆ ಹೊಂದಿರುತ್ತದೆ. ಸಾಮಾನ್ಯ, ಪ್ರವರ್ಗ-1, 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳು ಉತ್ತೀರ್ಣಗೊಳ್ಳಲು 60 ಅಂಕ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50 ಅಂಕಗಳಿಸಬೇಕು.
2ನೇ ಪರೀಕ್ಷೆ ಭಾಷಾಂತರ ಪರೀಕ್ಷೆಯಾಗಿರುತ್ತದೆ (ಕನ್ನಡದಿಂದ ಇಂಗ್ಲಿಶ್, ಇಂಗ್ಲಿಶ್‌ನಿಂದ ಕನ್ನಡ) 100 ಅಂಕಗಳನ್ನು ಪತ್ರಿಕೆ ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾಗಲು ಸಾಮಾನ್ಯ, ಪ್ರವರ್ಗ-1, 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳು ಉತ್ತೀರ್ಣಗೊಳ್ಳಲು 60 ಅಂಕ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50 ಅಂಕಗಳಿಸಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 16 ಅಕ್ಟೋಬರ್ 2021 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡಲು 21 ಅಕ್ಟೋಬರ್ 2021 ಕೊನೆಯ ದಿನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ತಾಲೂಕು ಪಂಚಾಯಿತಿಯಲ್ಲಿ ಒಬ್ಬರು ಯಾವುದೇ ಪದವಿ ಹೊಂದಿರುವ ವಿಕಲಚೇತನರನ್ನು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10ನೇ ತರಗತಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರುವ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ.
ಹೊಸನಗರ ತಾಲೂಕಿನ ಹರಿದ್ರಾವತಿ, ಯಡೂರು, ರಾಮಚಂದ್ರಪುರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳು ಖಾಲಿಯಿದ್ದು, ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿಗಳನ್ನು ಸಲ್ಲಿಕೆ ಮಾಡಲು ವಯೋಮಿತಿ 18 ರಿಂದ 45 ವರ್ಷ.
ಅರ್ಹ ವಿಕಲಚೇತನರು ನಿಗದಿತ ನಮೂನೆಯ ಅರ್ಜಿಗಳನ್ನು ತಾಲೂಕು ಪಂಚಾಯಿತಿಯ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳನ್ನು ಲಗತ್ತಿಸಿ 24/09/2021ರೊಳಗಾಗಿ ಸಲ್ಲಿಸಬೇಕು. ಅರ್ಜಿ ಮತ್ತು ಮಾಹಿತಿಗಾಗಿ ರವಿಕುಮಾರ್ 9731922693 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
Karnataka high court invited applications for the translator posts. Candidates can apply till October 16, 2021.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm