ಬ್ರೇಕಿಂಗ್ ನ್ಯೂಸ್
21-09-21 07:30 pm Source ; One India Kannada ಉದ್ಯೋಗ
ಹುಬ್ಬಳ್ಳಿ, ಸೆಪ್ಟೆಂಬರ್ 21 : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 20/10/2021 ಕೊನೆಯ ದಿನವಾಗಿದೆ.
ಪದವೀಧರ ಅಪ್ರೆಂಟಿಸ್ 125, ಡಿಪ್ಲೊಮಾ ಅಪ್ರೆಂಟಿಸ್ 75 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27ರಿಂದ ಅಕ್ಟೋಬರ್ 17ರ ತನಕ ನೋಂದಣಿ ಮಾಡಿಕೊಳ್ಳಬೇಕು. ಅರ್ಜಿ ಸಲ್ಲಿಸಲು 20/10/2021 ಕೊನೆಯ ದಿನ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7000 ರೂ. ಭತ್ಯೆ ನೀಡಲಾಗುತ್ತದೆ. ಅಪ್ರೆಂಟಿಶಿಪ್ ಕಾಯ್ದೆ 1961ರ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳ ಅಪ್ರೆಂಟಿಸ್ ಅವಧಿ ಒಂದು ವರ್ಷದ್ದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಬಿ. ಟೆಕ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. (ಮಾನ್ಯತೆಯನ್ನು AICTE ಅಥವ ರಾಜ್ಯ ಸರ್ಕಾರ/ ಕೇಂದ್ರ ಸರ್ಕಾರದಿಂದ ಪಡೆದಿರಬೇಕು).
ಅರ್ಜಿಗಳನ್ನು ಸಲ್ಲುಸುವವರು 3 ವರ್ಷದ ಡಿಪ್ಲೊಮಾ ಕೋರ್ಸ್‌ಗಳನ್ನು ಪಾಲಿಟೆಕ್ನಿಕ್ ಕಾಲೇಜು/ ಸಂಸ್ಥೆಯಿಂದ ಪಡೆದಿರಬೇಕು. ಕಾಲೇಜು/ ಸಂಸ್ಥೆ ಕೇಂದ್ರ ಅಥವ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಅಂಗನವಾಡಿ ಸಹಾಯಕಿರ ಹುದ್ದೆ; ಹಾಸನ ಜಿಲ್ಲೆಯ ಅರಕಲಗೂಡು ಸಮಗ್ರ ಶಿಶು ಅಭಿವೃದ್ದಿ ಯೋಜನೆಯಲ್ಲಿ ಖಾಲಿ ಇರುವ 3 ಅಂಗನವಾಡಿ ಸಹಾಯಕಿರ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ ಅರಕಲಗೂಡು 08175-220124 ಸಂಖ್ಯೆಗೆ ಕರೆ ಮಾಡಬಹುದು.
ಹುದ್ದೆಗಳು ಖಾಲಿ ಇರುವ ಸ್ಥಳ; ರಾಮನಾಥಪುರ, ಬೆಳವಾಡಿ, ಕತ್ತಿಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಬಿಳಗೂಲಿ-1, ಅಂಕನಹಳ್ಳಿ, ಮುಂಡಗೋಡು ಅಂಗನವಾಡಿ ಕೇಂದ್ರಗಳಲ್ಲಿ ಸಾಮಾನ್ಯ ಮೀಸಲಾತಿಯಲ್ಲಿ ಖಾಲಿ ಇವೆ.
ಬೇಲೂರು ತಾಲ್ಲೂಕು; ಬೇಲೂರು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13 ಸಂಜೆ 5.30. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಾಲೂರು ಕಾಂಪ್ಲೆಕ್ಸ್, ಡಾಕ್ಟರ್ ಬಿ. ಆರ್. ಅಂಬೇಡ್ಕರ್ ವೃತ್ತ, ಬೇಲೂರು ದೂರವಾಣಿ ಸಂಖ್ಯೆ 08177-222269 ಇವರನ್ನು ಸಂಪರ್ಕಿಸಬಹುದಾಗಿದೆ.
ಆಲೂರು ತಾಲ್ಲೂಕು; ಬ್ಯಾಬಾ ಕಾಲೋನಿ ಅಂಗನವಾಡಿ ಕೇಂದ್ರ (ಪ.ಜಾತಿ) ಹಾಗೂ ಕವಳಿಕೆರೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತರು ಅಕ್ಟೋಬರ್ 13ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಲೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08170-218220.
HESCOM invited applications for graduate and diploma apprentice posts. Candidates can apply till 20/10/2021.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm