ಬ್ರೇಕಿಂಗ್ ನ್ಯೂಸ್
18-02-22 11:27 am Source: Oneindia Kannada ಉದ್ಯೋಗ
ದಾವಣಗೆರೆ, ಫೆಬ್ರವರಿ 18; ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 14 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವ ಸಂಭಾವನೆ ನಿಗದಿ ಮಾಡಲಾಗಿದೆ. ಮೀಸಲಾತಿಗನುಸಾರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ದಾವಣಗೆರೆ ತಾಲ್ಲೂಕಿನ ಬೇತೂರು-2ಎ (ಮಹಿಳೆ), ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ- ಸಾಮಾನ್ಯ (ಗ್ರಾಮೀಣ ಅಭ್ಯರ್ಥಿ) ಮೀಸಲಾತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣವಾಗಿರಬೇಕು.
ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದವರಾಗಿರಬೇಕು. ಈ ಕುರಿತು ತಹಶೀಲ್ದಾರ್‌ರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಹಾಗೂ ಸ್ಥಳೀಯ ಮತದಾರರ ಪಟ್ಟಿಯ ಭಾಗದ ಪ್ರತಿ ಸಲ್ಲಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ವಯಸ್ಕರ ಶಿಕ್ಷಣದಡಿ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ, ಉಪಪ್ರೇರಕ ಅಥವಾ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಸೇವಾ ಪ್ರಮಾಣಪತ್ರ ಸಲ್ಲಿಸಿದಲ್ಲಿ ಆದ್ಯತೆ ನೀಡಲಾಗುವುದು ಅಲ್ಲದೆ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಸೇವಾ ಪ್ರಮಾಣ ಪತ್ರ ಅಥವಾ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆಯದ ಅಭ್ಯರ್ಥಿಗಳು ಇಲ್ಲದಿದ್ದಲ್ಲಿ ಎಸ್‍ಎಸ್‍ಎಲ್‍ಸಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.
ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಪಿಡಿಒ ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಮೀಸಲಾತಿ ಪ್ರಮಾಣ ಪತ್ರ, ರಹವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆ ಲಗತ್ತಿಸಿ, ಆಯಾ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಅಥವಾ ಪಿಡಿಒಗೆ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಎಸ್‍ಬಿಎಂ ಕಟ್ಟಡ, ನಿಟ್ಟುವಳ್ಳಿ ಹೊಸ ಬಡಾವಣೆ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8722313666.
ಫೆಬ್ರವರಿ 25ಕ್ಕೆ ಉದ್ಯೋಗ ಮೇಳ;
ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಇರುವ ತೋಟದಪ್ಪನ ಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋಬೆಲ್ ಹೋಟಲ್ ಹಾಗೂ ಕನ್ವೆಷನ್ ಸೆಂಟರ್‌ನಲ್ಲಿ ಫೆಬ್ರವರಿ25 ರಂದು ಆಯೋಜನೆ ಮಾಡಲಾಗಿದೆ.
ಅಂದು ಬೆಳಗ್ಗೆ 9.30 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. 40 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಆಸಕ್ತ ವಿಕಲಚೇತನರು ಉದ್ಯೋಗಮೇಳದಲ್ಲಿ ಭಾಗವಹಿಸಿ ಉದ್ಯೋಗಮೇಳದ ಸದುಪಯೋಗ ಪಡೆಯುವಂತೆ ಕೋರಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್ 6364867795, [email protected]. ಸುಭಾಷ್ 9449864693, [email protected] ಅವರನ್ನು ಸಂಪರ್ಕಿಸಬಹುದಾಗಿದೆ.
ಸ್ವ ಉದ್ಯೋಗ ಆರಂಭಿಸಲು ತರಬೇತಿ;
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ 'ಸಂಕಲ್ಪ' ಯೋಜನೆ ಅಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಮೈಸೂರಿನ ಸ್ಫೂರ್ತಿ ಪರ್ಫಾರ್ಮನ್ ಸಲ್ಯೂಷನ್ಸ್ ಸಹಭಾಗಿತ್ವದಲ್ಲಿ ಆಯೋಜನೆ ಮಾಡಲಾಗಿದೆ.
ಕಿರು ಉದ್ಯಮ ಪ್ರಾರಂಭಿಸಲು ತಳಮಟ್ಟದ ಕಿರು ಉದ್ಯಮಿಗಳಿಗೆ ವಿವಿಧ ಕೌಶಲ್ಯಗಳನ್ನು ಕಲಿಯಲು ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಸಹಾಯ ಮಾಡುವುದು ಸರ್ಕಾರದ ಈ ವಿನೂತನ ಕಾರ್ಯಕ್ರಮ ಉದ್ದೇಶವಾಗಿದೆ. ಉದ್ಯಮಿಗಳಿಗೆ ಬೇಕಾಗುವ ಜ್ಞಾನ, ಕೌಶಲ್ಯ ಮತ್ತು ವ್ಯವಹಾರ ಜ್ಞಾನವನ್ನು ಪಡೆಯಲು ಅಗತ್ಯವಿರುವ ತರಬೇತಿ, ಮಾರ್ಗದರ್ಶನ ಮತ್ತು ಸಂಬಂಧಪಟ್ಟ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಲು ಬೇಕಾಗುವ ಸಲಹೆಗಳನ್ನು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಅನುಭವವಿರುವ ಪರಿಣಿತರು ಮತ್ತು ಮಾರ್ಗದರ್ಶಕರು ಉಚಿತವಾಗಿ ಮಾರ್ಗದರ್ಶನ ನೀಡಿ ಸಹಕರಿಸುತ್ತಾರೆ.
ಈ ಕಿರು ಉದ್ಯಮಶೀಲತೆ ಕಾರ್ಯಕ್ರಮವು ತಳಮಟ್ಟದ ಕಿರು ಉದ್ಯಮಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಮತ್ತು ಮಹಿಳೆಯರಿಗೆ ವಿಶೇಷ ಗಮನವನ್ನು ನೀಡುವ ಕಾರ್ಯಕ್ರಮವಾಗಿದೆ. ಉದ್ಯಮಶೀಲತೆಯನ್ನು ಪ್ರಾರಂಭಿಸುವ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಎದುರಾಗುವ ಹಲವಾರು ಸವಾಲುಗಳನ್ನು ಎದುರಿಸಲು ತರಬೇತಿ ಸಹಾಯ ಮಾಡುತ್ತದೆ. ಈ ಕಾರ್ಯಕ್ರಮದಡಿಯಲ್ಲಿ ಉದ್ಯಮ ಪ್ರಾರಂಭಿಸಲು ಯಾವುದೇ ರೀತಿಯ ಸಹಾಯಧನ ಇರುವುದಿಲ್ಲ. ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಕೊಂಡು ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741501631.
Apply for grama panchayat library supervisor post at Davanagere. Job fair also organized in Davanagere on February 25th.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm