ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm