ಬ್ರೇಕಿಂಗ್ ನ್ಯೂಸ್
04-06-22 08:14 pm HK News Desk ಕರ್ನಾಟಕ
ಬೆಂಗಳೂರು, ಜೂ 04: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್ಎಸ್ಎಸ್ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್ಎಸ್ಎಸ್ ಬಿಟ್ಟಿಲ್ಲ. ಆರ್ಎಸ್ಎಸ್ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್ಎಸ್ಎಸ್ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್ಎಸ್ಎಸ್ಸ್ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು.

ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.
We will burn chaddis all over the state taunts Nalpad how many members can you arrest let's see challenges BJP government in Bengaluru.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm