ಬ್ರೇಕಿಂಗ್ ನ್ಯೂಸ್
06-06-22 09:46 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್ 6 : ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿರುವ ಕುರಿತಾಗಿ ರಾಜ್ಯದ ಪೊಲೀಸರು ಕೇಂದ್ರದ ಗುಪ್ತಚರ ಸಂಸ್ಥೆಯಿಂದ ಮಾಹಿತಿ ಪಡೆದಿದ್ದು ಜಂಟಿಯಾಗಿ ತನಿಖಾ ಕಾರ್ಯ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಸಚಿವ ಆರಗ ಅವರು, ಮಂಗಳೂರು ಕಡಲ ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದನ್ನು ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿಗಳು ತನಿಖೆಯಲ್ಲಿ ಕೈಜೋಡಿಸಿದ್ದಾರೆ.
ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದೆ ಯಾರಿದ್ದಾರೆ ಹಾಗೂ ಯಾವ ಉದ್ದೇಶದಿಂದ ನಿಷೇಧಿತ ಫೋನ್ ಬಳಕೆ ಮಾಡಲಾಗಿದೆ ಮತ್ತು ಯಾರ ಜೊತೆಗೆ ಸಂಪರ್ಕ ನಡೆಸಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಬಗ್ಗೆ ಕೇಂದ್ರ ಇಂಟೆಲಿಜೆನ್ಸ್ ಮೂಲಗಳನ್ನು ಉಲ್ಲೇಖಿಸಿ ಮೊದಲ ಬಾರಿಗೆ 'ಹೆಡ್ ಲೈನ್ ಕರ್ನಾಟಕ ' ಜೂನ್ 5ರಂದು ಸುದ್ದಿ ಪ್ರಕಟಿಸಿತ್ತು. ಇಂದು ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಪ್ರಕಟವಾಗಿದ್ದವು. ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಸ್ಯಾಟಲೈಟ್ ಫೋನ್ ವರ್ಕ್ ಆಗಿರುವುದನ್ನು ದೃಢಪಡಿಸಿರುವುದಲ್ಲದೆ, ತನಿಖೆ ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು ಸೇರಿ ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸಂಪರ್ಕ ಪತ್ತೆ ; ವಿದೇಶಕ್ಕೆ ಕರೆ, ಉಗ್ರರ ಜಾಡಿನ ಶಂಕೆ
Satellite phones active in Mangalore, Home Minister Araga Jnanendra orders for probe to Central and state police. f Karnataka. In the last 10 days, satellite phones have been used from four locations to make contacts. It has come to the knowledge of the intelligence agencies that the satellite phones are active in Natekal on the outskirts of Mangaluru, Kulai, forest area between Kadur and Birur in Chikkamagalur, Yellapur and Sirsi in Uttara Kannada district.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm