ಬ್ರೇಕಿಂಗ್ ನ್ಯೂಸ್
08-06-22 06:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 8 : ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನವರು ಹೇಳಿದಕ್ಕೆಲ್ಲಾ ಒಪ್ಪಿಕೊಳ್ಳಬೇಕಾ? ನಾವು 32 ಮಂದಿ ಶಾಸಕರು ಇದ್ದೇವೆ. ಕಾಂಗ್ರೆಸ್ ನವರು 25 ಶಾಸಕರಿದ್ದಾರೆ. ಯಾರ ಬಳಿ ಹೆಚ್ಚು ಮತಗಳು ಇವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇವರ ದಬ್ಬಾಳಿಕೆಗೆಲ್ಲಾ ನಾವು ಬಗ್ಗಲು ಆಗುತ್ತಾ? ಎಂದು ನೇರವಾಗಿ ಅವರು ಹೇಳಿದರು.
ನಮ್ಮ ಅಭ್ಯರ್ಥಿ ಚುನಾವಣಾ ಕಣದಿಂದ ಯಾಕೆ ಹಿಂದೆ ಸರಿಯಬೇಕು ಎಂದು ಪ್ರಶ್ನಿಸಿದ ಅವರು, ನಾವೇನು ಸಂಧಾನ ಮಾಡುತ್ತಿಲ್ಲ. ನನ್ನ ಬಳಿ ಯಾರು ಸಂಧಾನಕ್ಕೆ ಬಂದಿದ್ದಾರೆ ಅನ್ನೋದನ್ನು ಅವರು ಹೇಳಲಿ ಎಂದರು. ನಾವು ಮೊದಲು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಇವರು ನಮ್ಮ ಜೊತೆ ಸಮಾಲೋಚನೆ ಮಾಡಿ ಅಭ್ಯರ್ಥಿ ಹಾಕಿದ್ದಾರಾ? ಬೆಂಬಲ ಕೊಡಿ ಅಂತ ನಮ್ಮ ಪಕ್ಷದ ಅಧ್ಯಕ್ಷರನ್ನು ಕೇಳಬಹುದಾಗಿತ್ತಲ್ಲವೇ? ಅವರು ಸಿ.ಎಂ.ಇಬ್ರಾಹಿಂ ಅವರಿಗೆ ಹಳೆಯ ಸ್ನೇಹಿತರು ಅಲ್ಲವೇ? ಒಂದು ಮಾತು ಅವರನ್ನು ಕೇಳಬಹುದಿತ್ತು. ಈಗ ಅಭ್ಯರ್ಥಿಯನ್ನು ವಾಪಸ್ ತೆಗೆದುಕೊಳ್ಳಲಿ ಎಂದು ಹೇಳುವುದು ಭಂಡತನ. ನಾವೇನು ಇವರ ಗುಲಾಮರಾ? ಎಂದು ಕಿಡಿಕಾರಿದರು.
ಧಾರವಾಡದಲ್ಲಿ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಅಭ್ಯರ್ಥಿ ಬಗ್ಗೆ ಮತ್ತೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತರನ್ನು ನಿಲ್ಲಿಸಿದ್ದೇವೆ, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದ್ದಾರೆ. ಆದರೆ, ನಾವು ಅಲ್ಪಸಂಖ್ಯಾತರನ್ನು ನಿಲ್ಲಿಸಿದಾಗ ಅವರು ತಮ್ಮ ಪಕ್ಷದ ಮತಗಳನ್ನು ನೀಡಲಿಲ್ಲ. ಅವರು ಯಾವಾಗ ಮತ ನೀಡಿದ್ದಾರೆ ನಮಗೆ? ಹಿಂದೆ ಇಕ್ಬಾಲ್ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಕೆಂದು ಹೊರಟಾಗ, ಯಾವುದೇ ಕಾರಣಕ್ಕೂ ಅವರನ್ನು ಮಂತ್ರಿ ಮಾಡಬಾರದು ಎಂದು ಹಠ ಹಿಡಿದು ಟವಲ್ ಕೊಡವಿಕೊಂಡು ಹೋಗಿದ್ದರು ಸಿದ್ದರಾಮಯ್ಯ. ಅಂಥ ವ್ಯಕ್ತಿ ಈಗ ಅಲ್ಪಸಂಖ್ಯಾತರ ಬಗ್ಗೆ ಮಾತನಾಡುತ್ತಿದ್ದಾರೆ.
ಹೆಚ್.ಡಿ.ದೇವೇಗೌಡರು ರಾಜ್ಯಸಭೆಗೆ ಹೋಗಬೇಕಾದ ಸನ್ನಿವೇಶವೇ ಬೇರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ನಮಗೆ ಫೋನ್ ಮಾಡಿ ಹೇಳಿದ್ದರು. ನಮ್ಮ ಹೈಕಮಾಂಡ್ ಹೇಳಿದ್ದಾರೆ, ದೇವೇಗೌಡರಂತಹ ಹಿರಿಯರು ಸಂಸತ್ತಿಗೆ ಹೋಗಬೇಕು ಎಂದು ಹೇಳಿದ್ದಾರೆ. ಹೀಗಾಗಿ ಬಿಜೆಪಿಯಿಂದ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಅವರು ಹೇಳಿದ್ದರು. ಬಿಜೆಪಿ ಅಭ್ಯರ್ಥಿಯನ್ನು ಹಾಕದಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ಹಾಕಲಿಲ್ಲ. ನಾವು ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಮಾಡುವುದಕ್ಕಿಂತ ಮುಂಚೆಯೇ ಸೋನಿಯಾ ಗಾಂಧಿ ಅವರ ಜತೆ ದೇವೇಗೌಡರು ಮಾತನಾಡಿದ್ದಾರೆ. ನಾವು ಮೊದಲು ಕೇಳಿದ್ದೇವೆಯೇ ಹೊರತು ಅವರಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
The former Chief Minister also claimed that even if JD(S) manages to get 22 second preferential votes from the Congress, it will be in a leading position. Six candidates are in the fray for the Rajya Sabha poll to four seats from Karnataka, necessitating a heated contest for the fourth seat. Despite not having the adequate number of votes to win the fourth seat from the state Assembly, all the three political parties in the state -- BJP, Congress and JD(S) -- have fielded candidates for the seat, forcing an election.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm