ಬ್ರೇಕಿಂಗ್ ನ್ಯೂಸ್
14-06-22 11:27 am Bengalore Correspondent ಕರ್ನಾಟಕ
ಬೆಂಗಳೂರು, ಜೂ 14: ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದ ಸಿದ್ದಾಂತ್ ಹಾಗೂ ಐವರಿಗೆ ಸೋಮವಾರ ರಾತ್ರಿ ಠಾಣೆ ಜಾಮೀನು ಸಿಕ್ಕಿದೆ.
ಸಿದ್ದಾಂತ್ ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ವರದಿಗಳಿಂದ ದೃಢಪಟ್ಟಿದ್ದರಿಂದ ಸೋಮವಾರ ಬಂಧನಕ್ಕೊಳಗಾಗಿದ್ದರು. ಬೆಂಗಳೂರಿನ ಟ್ರಿನಿಟಿ ವೃತ್ತದ ಬಳಿ ಇರುವ ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಸುದ್ದಿ ತಿಳಿದ ಪೊಲೀಸರು ದಾಳಿ ನಡೆಸಿದ್ದರು. ಹಲಸೂರು ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು 50ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದರು.
ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ನಟ ಸಿದ್ದಾಂತ್ ಕಪೂರ್ ಸೇರಿದಂತೆ ಐವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ ಎಂದು ತನಿಖಾಧಿಕಾರಿ ಮಂಜುನಾಥ್ ಹೇಳಿದ್ದರು.
ಸಿದ್ದಾಂತ್ ಸೇರಿದಂತೆ ಐವರಿಗೆ ಠಾಣೆ ಜಾಮೀನು ನೀಡಿ ಕಳಿಸಲಾಗಿದೆ, ಹೆಚ್ಚಿನ ವಿಚಾರಣೆ ಅಗತ್ಯವಿದ್ದರೆ ತನಿಖಾಧಿಕಾರಿ ಮುಂದೆ ಹಾಜರಾಗಬೇಕಾಗುತ್ತದೆ'' ಎಂದು ಪೂರ್ವ ವಲಯದ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ.
ದಾಳಿ ವೇಳೆ ನಡೆದಿದ್ದೇನು?
ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ದಿ ಪಾರ್ಕ್ ಫೈವ್ ಸ್ಟಾರ್ ಹೋಟೆಲ್ನಲ್ಲಿ ನಡೆದಿರುವ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹಲಸೂರು ಠಾಣೆ ಎಸ್ ಐ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ದಾಳಿ ವೇಳೆ 7 ಕಸದ ಡಬ್ಬಿಯಲ್ಲಿ 4 ಗುಲಾಬಿ ಮತ್ತು 3 ನೀಲಿ ಬಣ್ಣದ ಎಂಡಿಎಂಎ ಟ್ಯಾಬ್ಲೇಟ್ಗಳು ಪತ್ತೆಯಾಗಿತ್ತು. ಜೊತೆಗೆ 5 ಗ್ರಾಂ ತೂಕದ ಗಾಂಜಾ ಕೂಡ ಡಸ್ಟ್ ಬೀನ್ನಲ್ಲಿತ್ತು. ಈ ಬಗ್ಗೆ ಪ್ರಶ್ನಿಸಿದ್ದ ಪೊಲೀಸರಿಗೆ ಡ್ರಗ್ಸ್ ತಮ್ಮದಲ್ಲ ಎಂದು ಪಾರ್ಟಿಯಲ್ಲಿದ್ದವರು ವಾದಿಸಿದ್ದರು. ಡ್ರಗ್ಸ್ ಸೇವನೆ ಬಗ್ಗೆ ಖಚಿತಪಡಿಸಿಕೊಳ್ಳಲು ಸಂತೋಷ್ ಆಸ್ಪತ್ರೆಯಲ್ಲಿ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ಐವರಿಗೆ ಪಾಸಿಟಿವ್ ರಿಪೋರ್ಟ್ ಬಂದಿತ್ತು
ಯಾರು ಯಾರು ಬಂಧಿತರು
ಹಿಂದಿ ಚಿತ್ರರಂಗದ ಜನಪ್ರಿಯ ನಟ ಶಕ್ತಿ ಕಪೂರ್ ಪುತ್ರ ಸಿದ್ಧಾಂತ್ ಕಪೂರ್, ಇಂದಿರಾನಗರ ನಿವಾಸಿ, ಉದ್ಯಮಿ ಅಕಿಲ್ ಸೋನಿ, ಪಂಜಾಬ್ ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಹರ್ಜೋತ್ ಸಿಂಗ್ ಆಗಿದ್ದಾನೆ. ಬಿಟಿಎಂ ಲೇಔಟ್ ನಿವಾಸಿ ಹನಿ ಹಾಗೂ ಮಾಗಡಿ ರೋಡ್ ನಿವಾಸಿ ಅಕಿಲ್ ಎಂಬಾತ ಸೇರಿದಂತೆ 50ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಕಾನೂನಿನ ಪ್ರಕಾರ ಎಲ್ಲರ ವೈದ್ಯಕೀಯ ಪರೀಕ್ಷೆ ನಡೆಸಿ, ಡ್ರಗ್ಸ್ ಸೇವನೆ ಬಗ್ಗೆ ದೃಢಪಟ್ಟ ಬಳಿಕ ಠಾಣೆಗೆ ಕರೆದೊಯ್ದು, ಹೆಚ್ಚಿನ ವಿಚಾರಣೆ ನಡೆಸಲಾಗಿತ್ತು.
Bollywood actress Shraddha kapoor's brother and Shakti kapoor's son, Siddhanth kapoor was arrested on Monday for allegedly consuming drugs at a party in Bengaluru on Sunday night. DCP Guled said, " Siddanth Kapoor's medical shows he had consumed drugs. We have already arrested him and are following the procedure. We will be sending him to judicial custody."Now, the latest reports as per ANI reveal that Siddhanth has been granted bail and was released late on Monday. In addition, the 4 other people who were arrested have also been released and granted bail.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm