ಬ್ರೇಕಿಂಗ್ ನ್ಯೂಸ್
21-06-22 10:02 am HK News Desk ಕರ್ನಾಟಕ
ಮೈಸೂರು, ಜೂ 21: ವಿಶ್ವ ಯೋಗ ದಿನಾಚರಣೆ ಹಿನ್ನೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಮಿಕರು, ಸರ್ಕಾರಿ ನೌಕರರ ಜೊತೆ ಅರಮನೆ ನಗರಿಯಲ್ಲಿ 15 ಸಾವಿರ ಯೋಗ ಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಯೋಗಾಸನ ಮಾಡಿದ್ದಾರೆ.
ಖಾಸಗಿ ಹೋಟೆಲಿನಿಂದ ಬೆಳಗ್ಗೆ 6:30ರ ವೇಳೆಗೆ ಅರಮನೆ ಮುಂಭಾಗಕ್ಕೆ ಮೋದಿ ಆಗಮಿಸಿದರು. ಚುಟುಕಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಆಯುಷ್ ಸಚಿವ ಸರ್ಬಾನಂದ ಸೊನೊವಾಲ್, ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಯೋಗದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಕೇವಲ ವ್ಯಕ್ತಿಗೆ ಮಾತ್ರ ಯೋಗ ಅಲ್ಲ. ಇದು ಮನುಕುಲಕ್ಕೆ ಯೋಗ ಮುಖ್ಯ. ಯೋಗದಿಂದ ವ್ಯಕ್ತಿಗೆ ಮಾತ್ರ ಶಾಂತಿ ಸಿಗುವುದಿಲ್ಲ. ಇಡಿ ವಿಶ್ವಕ್ಕೆ ಶಾಂತಿ ಸಿಗುತ್ತದೆ ಎಂದು ಕೊಂಡಾಡಿದರು.
ಮೈಸೂರಿನಂತಹ ಭಾರತದ ಆಧ್ಯಾತ್ಮಿಕ ಕೇಂದ್ರಗಳಿಂದ ಶತಮಾನಗಳಿಂದ ಪೋಷಿಸಿಕೊಂಡು ಬಂದಿರುವ ಯೋಗ ಶಕ್ತಿ ಇಂದು ವಿಶ್ವ ಆರೋಗ್ಯಕ್ಕೆ ದಿಕ್ಸೂಚಿಯಾಗಿದೆ. ಇಂದು ಯೋಗವು ಜಾಗತಿಕ ಸಹಕಾರಕ್ಕೆ ಪರಸ್ಪರ ಆಧಾರವಾಗುತ್ತಿದೆ. ಇಂದು ಯೋಗವು ಮನುಕುಲಕ್ಕೆ ಆರೋಗ್ಯಕರ ಜೀವನದ ನಂಬಿಕೆಯನ್ನು ನೀಡುತ್ತಿದೆ. ಯೋಗ ಈಗ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಯೋಗವು ಯಾವುದೇ ವ್ಯಕ್ತಿಗೆ ಮಾತ್ರವಲ್ಲ, ಇಡೀ ಮಾನವಕುಲಕ್ಕೆ. ಆದ್ದರಿಂದ, ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನದ ಥೀಮ್ – ಮಾನವೀಯತೆಗಾಗಿ ಯೋಗ ಆಗಿದೆ. ಯೋಗವು ನಮಗೆ ಶಾಂತಿಯನ್ನು ತರುತ್ತದೆ. ಯೋಗದಿಂದ ಶಾಂತಿಯು ಕೇವಲ ವ್ಯಕ್ತಿಗಳಿಗೆ ಮಾತ್ರವಲ್ಲ. ಯೋಗದಿಂದ ನಮ್ಮ ಸಮಾಜಕ್ಕೆ ಶಾಂತಿ ಸಿಗುತ್ತದೆ. ಯೋಗವು ನಮ್ಮ ರಾಷ್ಟ್ರಗಳಿಗೆ ಮತ್ತು ಜಗತ್ತಿಗೆ ಶಾಂತಿಯನ್ನು ತರುತ್ತದೆ. ಮತ್ತು ಯೋಗವು ನಮ್ಮ ವಿಶ್ವಕ್ಕೆ ಶಾಂತಿಯನ್ನು ತರುತ್ತದೆ ಎಂದು ತಿಳಿಸಿದರು.
ಇಂದು ಜೀವನ ಶೈಲಿ ಭಾರೀ ಬದಲಾವಣೆ ಆಗಿದೆ. ಯೋಗ ನಮ್ಮ ಬದುಕಿಗೂ ಪ್ರೇರಣೆಯಾಗಿದೆ. ದೇಶದ 75 ಐತಿಹಾಸಿಕ ಕೇಂದ್ರ ಸ್ಥಳಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಜೀವನ ಒಂದು ಭಾಗವಲ್ಲ, ಇಂದು ಯೋಗ ಜೀವನ ಶೈಲಿಯೇ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗಾರ್ಡಿಯನ್ ರಿಂಗ್ ಆಫ್ ಯೋಗ ಮಾಡಲಾಗುತ್ತಿದೆ. ಜಗತ್ತಿನ ಹಲವು ದೇಶಗಳಲ್ಲಿ ಸುರ್ಯೋದಯದೊಂದಿಗೆ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಯೋಗ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕಾಗಿ ಆಯುಷ್ಮಾನ್ ಇಲಾಖೆಯಲ್ಲಿ ಸ್ಟಾರ್ಟ್ಅಪ್ ಕೂಡ ತರಲಾಗಿದೆ. ವಿಶ್ವದಲ್ಲಿ ರೋಗ ಮುಕ್ತಿಗೆ ಯೋಗಾಸನವೇ ಆಧಾರವಾಗಿದೆ. ಪ್ರತಿನಿತ್ಯ ಪ್ರಾಣಾಯಾಮ, ಯೋಗ ಮಾಡೋದನ್ನು ರೂಢಿಸಿಕೊಳ್ಳಿ ಎಂದರು.
ಭಾಷಣ ಮುಗಿದ ಬಳಿಕ ವೇದಿಕೆಯಿಂದ ಕೆಳಗೆ ಇಳಿದ ಮೋದಿ ಯೋಗಾಸನ ಮಾಡಲು ನಿಗದಿಯಾದ ಸ್ಥಳಕ್ಕೆ ತೆರಳಿದರು. ಬೆಳಗ್ಗೆ 7:08ಕ್ಕೆ ಆರಂಭಗೊಂಡ ಯೋಗ ಕಾರ್ಯಕ್ರಮ ಶಾಂತಿ ಮಂತ್ರದೊಂದಿಗೆ 7:52ಕ್ಕೆ ಮುಕ್ತಾಯಗೊಂಡಿತು.
15 ಸಾವಿರ ಮಂದಿ ಪೈಕಿ ಸುಮಾರು 8 ಸಾವಿರ ಜನರು ಮೋದಿ ಯೋಗ ಮಾಡುವ ಜಾಗದ ಅಕ್ಕಪಕ್ಕದಲ್ಲೇ ಯೋಗ ಮಾಡಿದ್ದಾರೆ. ಉಳಿದವರು ಅರಮನೆಯ ಹಿಂಭಾಗದ ಆವರಣದಲ್ಲಿ ಯೋಗ ಮಾಡಿದ್ದಾರೆ. 15 ಸಾವಿರ ಜನರಲ್ಲಿ 3 ಸಾವಿರ ಜನರು ಕೇಂದ್ರ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ 12 ಸಾವಿರ ಮಂದಿ ಸ್ಥಳೀಯರು ಭಾಗವಹಿಸಿದ್ದರು.
ಟೀ ಶರ್ಟ್, ಯೋಗ ಮ್ಯಾಟ್, ವಾಟರ್ ಬಾಟಲಿ ಅನ್ನು ಆಯೋಜಕರು ಅದೇ ಸ್ಥಳದಲ್ಲಿ ನೀಡಿದ್ದಾರೆ. ಮೊಬೈಲ್ ಹೊರತು ಪಡಿಸಿ ಬೇರೆ ಯಾವುದೇ ವಸ್ತುಗಳ ತೆಗೆದು ಕೊಂಡು ಹೋಗಲು ಅವಕಾಶವಿರಲಿಲ್ಲ.
5 ಸಾವಿರ ಯೋಗ ಒಕ್ಕೂಟದ ಸದಸ್ಯರು, 1200 ವಿದ್ಯಾರ್ಥಿಗಳು, ಶಿಕ್ಷಕರು, 2,500 ಜೆಎಸ್ಎಸ್ ಸಂಸ್ಥೆಯವರು, 600 ದ್ವಿತೀಯ ಪಿಯುಸಿ ತಂಡ, 600 ಕಾಲೇಜ್ ವಿದ್ಯಾರ್ಥಿಗಳು, 150 ನ್ಯಾಚುರೋಪತಿ, ಯೋಗ ಕಾಲೇಜು, 120 ಆಯುರ್ವೇದಿಕ್ ಕಾಲೇಜು, 100 ಕಾರ್ಮಿಕ ಇಲಾಖೆಯ ಸಿಬ್ಬಂದಿ, 70 ಡಿಎಫ್ಆರ್ಎಲ್, 300 ಎನ್ಎಸ್ಎಸ್ ವಿದ್ಯಾರ್ಥಿಗಳು, 100 ವಿಶೇಷ ಚೇತನರು, 100 ಹಾಸ್ಟೆಲ್ ವಿದ್ಯಾರ್ಥಿಗಳು, 30 ತೃತೀಯ ಲಿಂಗಿಗಳು, 100 ಕೆಎಸ್ ಆರ್ ಪಿ ಸಿಬ್ಬಂದಿ ಯೋಗ ಮಾಡಿದ್ದಾರೆ.
Participated in the Yoga Day programme in Mysuru. #YogaForHumanity pic.twitter.com/SJxDfEHeOx
— Narendra Modi (@narendramodi) June 21, 2022
As the world celebrates International Yoga Day, top leaders across the country led the early morning greetings, includinghome minister Amit Shah, and Uttar Pradesh chief minister Yogi Adityanath among others.In his tweet, home minister Amit Shah wrote: “With the efforts of Modi ji, our ancient tradition is proving to be a boon for the physical and mental health of people across the world. Be proud of your invaluable heritage on International Yoga Day and adopt it regularly.”
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm